ಬೆಂಗಳೂರು: ಕೊರೊನಾ ಲಾಕ್‌ಡೌನ್‌ನಿಂದಾಗಿ ಕಾಫಿ ಹಾಗೂ ಕರಿಮೆಣಸು ಬೆಳೆಗಾರರು ಸಂಕಷ್ಟದಲ್ಲಿದ್ದು ಬ್ಯಾಂಕ್ ಹಾಗೂ ಇತರ ಹಣಕಾಸು ಸಂಸ್ಥೆಗಳಲ್ಲಿ ಮಾಡಿರುವ ಸಾಲ ಮನ್ನಾ ಮಾಡುವಂತೆ ಮಾಜಿ ಪ್ರಧಾನಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆಯುವ ಮೂಲಕ ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸುವಂತೆ ಒತ್ತಾಯಿಸಿದ್ದಾರೆ. ಕೊರೊನಾ ಕಾರಣದಿಂದಾಗಿ ಜಾಗತಿಕವಾಗಿ ಕಾಫಿ ಹಾಗೂ ಕರಿಮೆಣಸು ಬೆಲೆ ಇಳಿಕೆಯಾಗಿದೆ. ಬೆಳೆಗಾರರು ಇದರಿಂದ ಸಾಕಷ್ಟು ಸಂಕಷ್ಟದಲ್ಲಿದ್ದಾರೆ. ಬೆಳೆ ಸಾಲವನ್ನು ತೀರಿಸಲು ಸಾಧ್ಯವಾಗುತ್ತಿಲ್ಲ.ಕಳೆದ ಎರಡು ವರ್ಷಗಳಿಂದ ಮಳೆ ಹಾನಿಯಿಂದಾಗಿ ಕಾಫಿ ಬೆಳೆಗಾರರು ಈಗಾಗಲೇ ತೊಂದರೆಯಲ್ಲಿದ್ದಾರೆ. ಮಳೆ, ಪ್ರವಾಹಕ್ಕೆ ತುತ್ತಾಗಿ ಬೆಳೆ, ಜಮೀನು ನಾಶವಾಗಿದೆ. ಇದೀಗ ಕೊರೊನಾ ಸೋಂಕು ಲಾಕ್‌ಡೌನ್ ಪರಿಣಾಮ ಸಮಸ್ಯೆಯನ್ನು ಮತ್ತಷ್ಟು ಜಟಿಲಗೊಳಿಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕಾಫಿ ಬೆಳೆ ಶೇ 80 ಹೊರ ದೇಶಗಳಿಗೆ ರಫ್ತಾಗುತ್ತಿತ್ತು. ಆದರೆ ಕೊರೊನಾ ಕಾರಣದಿಂದಾಗಿ ಇದು ಸಾಧ್ಯವಾಗುತ್ತಿಲ್ಲ. ಕರಿಮೆಣಸು ಕಳೆದ ಮೂರು ವರ್ಷಗಳ ಹಿಂದೆ ಒಂದು ಕೆಜಿಗೆ 700 ರೂಪಾಯಿ ಇತ್ತು. ಆದರೆ ಇದೀಗ 300 ಕ್ಕೆ ಇಳಿಕೆಯಾಗಿದೆ. ಪರಿಣಾಮ ಹಾಸನ, ಚಿಕ್ಕಮಗಳೂರು ಭಾಗಗಳಲ್ಲಿ ಬೆಳೆಗಾರರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ವಿವರಿಸಿದ್ದಾರೆ. ಈ ನಿಟ್ಟಿನಲ್ಲಿಕಾಫಿ ಬೆಳೆಗಾರರು ಬ್ಯಾಂಕ್ ಹಾಗೂ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಮಾಡಿದ ಸಾಲವನ್ನು ಮನ್ನಾ ಮಾಡಬೇಕು, ಕಾಫಿ ಬೆಳೆಗಾರರು ಚೇತರಿಸಿಕೊಳ್ಳಲು ಇದೊಂದೇ ದಾರಿ ಎಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.
from India & World News in Kannada | VK Polls https://ift.tt/2L2rqDz