ಈದ್ ಮುಬಾರಕ್: ಭಾರತ-ಬಾಂಗ್ಲಾ ಗಡಿಯಲ್ಲಿ ಪರಸ್ಪರ ಸಿಹಿ ಹಂಚಿಕೊಂಡ ಯೋಧರು!

ಸಿಲಿಗುರಿ: ವಿಶ್ವದಾದ್ಯಂತ ಈದ್ ಹಬ್ಬವನ್ನು ಆಚರಿಸಲಾಗುತ್ತುದ್ದು, ಕೊರೊನಾ ವೈರಸ್ ಹಾವಳಿಯ ಹಿನ್ನೆಲೆಯಲ್ಲಿ ಈ ಬಾರಿಯ ಈದ್ ಹಬ್ಬ ತುಸು ಕಳೆಗುಂದಿದೆ. ಆದರೆ ಭಾರತವೂ ಸೇರಿದಂತೆ ವಿಶ್ವದ ಎಲ್ಲೆಡೆ ಮುಸ್ಲಿಂ ಬಾಂಧವರು ತಮ್ಮ ಮನೆಗಳಲ್ಲೇ ಸಂಭ್ರಮದಿಂದ ಹಬ್ಬ ಆಚರಿಸುತ್ತಿದ್ದಾರೆ. ಅದರಂತೆ ಭಾರತ-ಬಾಂಗ್ಲಾ ಗಡಿಯಲ್ಲಿ ಉಭಯ ದೇಶಗಳ ಯೋಧರು ಪರಸ್ಪರ ಸಿಹಿ ಹಂಚಿಕೊಂಡು ಈದ್ ಹಬ್ಬವನ್ನು ಆಚರಿಸಿರುವುದು ವಿಶೇಷವಾಗಿತ್ತು. ಪಶ್ಚಿಮ ಬಂಗಾಳದ ಸಿಲಿಗುರಿಯ ಫುಲ್ಬರಿ ಗಡಿಯಲ್ಲಿ ಭಾರತದ ಗಡಿ ಭದ್ರತಾ ಪಡೆ() ಹಾಗೂ ಬಾಂಗ್ಲಾದೇಶದ ಬಾರ್ಡರ್ ಗಾರ್ಡ್ ಯೋಧರು ಪರಸ್ಪರ ಸಿಹಿ ಹಂಚಿಕೊಂಡು ಈದ್ ಹಬ್ಬದ ಶುಭಾಶಯ ಕೋರಿದರು. ಪ್ರಮುಖ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಭಾರತ-ಬಾಂಗ್ಲಾ ಗಡಿಯಲ್ಲಿ ಯೋಧರು ಪರಸ್ಪರ ಸಿಹಿ ಹಂಚಿಕೊಳ್ಳುವ ಪದ್ದತಿ ಮೊದಲಿನಿಂದಲೂ ರೂಢಿಯಲ್ಲಿದೆ. ಇನ್ನು ಈದ್ ಹಬ್ಬದ ಪ್ರಯುಕ್ತ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು ದೇಶವಾಸಿಗಳಿಗೆ ಶುಭಾಶಯ ಕೋರಿದ್ದಾರೆ.


from India & World News in Kannada | VK Polls https://ift.tt/2ZwGrWw

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...