ಬೆಂಗಳೂರು: ದಿನದಿಂದ ದಿನಕ್ಕೆ ತನ್ನ ವ್ಯಾಪ್ತಿಯನ್ನು ವೃದ್ಧಿಸಿಕೊಳ್ಳುತ್ತಿರುವ ಕೊರೊನಾ ವೈರಸ್‌ಗೆ ಇಲ್ಲಿಯವರೆಗೆ ವಿಶ್ವದಲ್ಲಿ ಸುಮಾರು 3.5 ಲಕ್ಷಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 56 ಲಕ್ಷ ಮಂದಿಗೆ ಕೋವಿಡ್-19 ಪಾಸಿಟಿವ್ ಇದೆ. ಸಮಾಧಾನಕರ ವಿಚಾರ ಎಂದರೆ ಸುಮಾರು 23 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಗುಣಮುಖರಾದ ಸಂಖ್ಯೆಯನ್ನು ಗಮನಿಸಿದಾಗ ಕೊಂಚ ನಿರಾಳವಾಗುತ್ತದೆ. ಆದರೆ ಸೋಂಕು ಹರಡುವಿಕೆಯ ಪ್ರಮಾಣ ಮಿತಿಮೀರಿದರೆ ಪರಿಣಾಮಕಾರಿ ಚಿಕಿತ್ಸೆ ಸಿಗದೆ ಸಾವನ್ನಪ್ಪುವವರ ಸಂಖ್ಯೆ ಜಾಸ್ತಿಯಾಗುತ್ತದೆ. ಈ ದೃಷ್ಟಿಯಲ್ಲಿ ವ್ಯಾಪಿಸದಂತೆ ತಡೆಗಟ್ಟುವುದರಿಂದ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡಬಹುದು. ಭಾರತದಲ್ಲಿ ಕೊರೊನಾ ಸೋಂಕಿನಿಂದ ಸತ್ತವರ ಸಂಖ್ಯೆ 4,500 ದಾಟಿದೆ. ಸುಮಾರು 1.6 ಮಂದಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಕರ್ನಾಟದಲ್ಲಿ ಇದುವರೆಗೆ ಕೊರೊನಾ ಸೋಂಕಿನಿಂದ 44 ಮಂದಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಸೋಂಕಿತರು ಅನ್ಯಕಾರಣದಿಂದ ಮೃತರಾಗಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಒಟ್ಟು 2,283 ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 748 ಮಂದಿ ಗುಣಮುಖರಾಗಿದ್ದಾರೆ. ಇನ್ನು ಸಕ್ರಿಯ ಸೋಂಕಿನ ಸಂಖ್ಯೆ 1,489 ಇದೆ.
from India & World News in Kannada | VK Polls https://ift.tt/2M3OIsW