ನಾವು ಬೇಡ ಅಂದ್ರೆ ನೀವೇ ನಿಭಾಯಿಸಿ: ಪ.ಬಂಗಾಳದಲ್ಲಿ ಮಮತಾ VS ಅಮಿತ್ ಶಾ!

ಕೋಲ್ಕತ್ತಾ: ಕೊರೊನಾ ವೈರಸ್ ಹಾವಳಿಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಮುಖ್ಯಮಂತ್ರಿ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಹೊಸ ಆರೋಪದಿಂದಾಗಿ ಪಶ್ಚಿಮ ಬಂಗಾಳ ಹಾಗೂ ಕೇಂದ್ರ ಸರ್ಕಾರದ ನಡುವೆ ಹೊಸದೊಂದು ಬಿಕ್ಕಟ್ಟು ಸೃಷ್ಟಿಯಾಗಿದ್ದು, ಕೇಂದ್ರ ಗೃಹ ಸಚಿವ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ಮಮತಾ ಬ್ಯಾನರ್ಜಿ ನಡುವಿನ ವಾಕ್ಸಮರಕ್ಕೂ ಕಾರಣವಾಗಿದೆ. ಕೊರೊನಾ ವೈರಸ್‌ ಹಾವಳಿ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಮಮತಾ ಬ್ಯಾನರ್ಜಿ, ಒಂದು ವೇಳೆ ರಾಜ್ಯ ಸರ್ಕಾರ ಈ ಪರಿಸ್ಥಿತಿ ನಿಭಾಯಿಸುವಲ್ಲಿ ವಿಫಲವಾಗಿದೆ ಎಂದೆನಿಸದರೆ ಖುದ್ದು ಅಮಿತ್ ಶಾ ಅವರೇ ಇಲ್ಲಿಗೆ ಬಂದು ವೈರಾಣು ಹರಡುವಿಕೆಯನ್ನು ನಿಯಂತ್ರಣಕ್ಕೆ ತರಲಿ ಎಂದು ಒತ್ತಾಯಿಸಿದ್ದಾರೆ. ನಾವು ವಿಫಲರು ಎಂದು ಅಮಿತ್ ಶಾ ಅವರಿಗೆ ಅನಿಸಿದರೆ ಅವರೇ ರಾಜ್ಯಕ್ಕೆ ಬಂದು ಪರಿಸ್ಥಿತಿಯನ್ನು ಹತೋಟಿಗೆ ತರಲಿ ಎಂದು ಹೇಳಿರುವುದಾಗಿ ಮಮತಾ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರ ಮೇಲೂ ಹರಿಹಾಯ್ದಿರುವ ಮಮತಾ ಬ್ಯಾನರ್ಜಿ, ವಲಸೆ ಕಾರ್ಮಿಕರ ವಿಷಯದಲ್ಲಿ ರೈಲ್ವೆ ಸಚಿವರು ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಒಟ್ಟಿನಲ್ಲಿ ಕೊರೊನಾ ವೈರಸ್ ಹಾವಳಿಯ ಕಾರಣದಿಂದಾಗಿ ಪಶ್ಚಿಮ ಬಂಗಾಳ ಹಾಗೂ ಕೇಂದ್ರ ಸರ್ಕಾರದ ನಡುವೆ ವೈಮನಸ್ಸು ಹೆಚ್ಚಾಗಿದ್ದು, ರಾಜ್ಯಕ್ಕೆ ಪದೇ ಪದೇ ಕೇಂದ್ರ ತಂಡ ರವಾನಿಸುತ್ತಿರುವ ಕೇಂದ್ರ ಗೃಹ ಸಚಿವಾಲಯದ ಕ್ರಮಕ್ಕೆ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.


from India & World News in Kannada | VK Polls https://ift.tt/36CEppf

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...