ಕೊರೊನಾ ಲೈವ್ ಅಪ್‌ಡೇಟ್ಸ್: ಭಾರತದಲ್ಲಿ 1 ಲಕ್ಷದ 98 ಸಾವಿರ ಗಡಿ ದಾಟಿದ ಸೋಂಕಿತರು!

ಚೀನಾದ ವುಹಾನ್ ನಲ್ಲಿ ಮೊದಲು ಪತ್ತೆಯಾಗಿದ್ದ ವಿಶ್ವಾದ್ಯಂತ 3ಲಕ್ಷದ 62 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದಿದೆ. ಭಾರತದಲ್ಲಿ ಪಾಸಿಟಿವ್ ಪ್ರಕರಣ 1 ಲಕ್ಷದ 98ಸಾವಿರ ದಾಟಿದೆ. ಜೂನ್ 2ರ ಕ್ಷಣಕ್ಷಣದ ಮಾಹಿತಿ ಇಲ್ಲಿದೆ:- -ಕರ್ನಾಟಕದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ 3,408 ಕ್ಕೆ ಏರಿಕೆಯಾಗಿದೆ. 52ಮಂದಿಯ ಸಾವಾಗಿದ್ದು, 1,328ಮಂದಿ ಗುಣಮುಖರಾಗಿದ್ದಾರೆ. ಸೋಂಕಿತ ಪ್ರಕರಣಗಳ ಪಟ್ಟಿಯಲ್ಲಿ ರಾಜ್ಯ 12ನೇ ಸ್ಥಾನದಲ್ಲಿದೆ.

-ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಸೋಂಕಿತರ ಸಂಖ್ಯೆ 1,98,370ಕ್ಕೆ ಏರಿಕೆಯಾಗಿದೆ. 95,754ಮಂದಿ ಗುಣಮುಖರಾಗಿದ್ದು, 5,608ಮಂದಿ ಸಾವನ್ನಪ್ಪಿದ್ದಾರೆ. ಸೋಂಕಿತ ಪ್ರಕರಣದ ದೇಶಗಳ ಪಟ್ಟಿಯಲ್ಲಿ ಭಾರತ 7ನೇ ಸ್ಥಾನದಲ್ಲಿದೆ. ಸೋಮವಾರ ಒಂದೇ ದಿನ 7,722 ಸೋಂಕಿತ ಪ್ರಕರಣ ಬೆಳಕಿಗೆ ಬಂದಿದೆ.

-ವಿಶ್ವದಾದ್ಯಂತ 3 ಲಕ್ಷದ 77ಸಾವಿರಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದೆ. 63 ಲಕ್ಷದ 65 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ. ಇದರಲ್ಲಿ 29ಲಕ್ಷದ 03 ಸಾವಿರಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. -ಅಮೆರಿಕದಲ್ಲಿ ಅತೀ ಹೆಚ್ಚು ಮಂದಿ ಸೋಂಕಿಗೆ ಒಳಗಾಗಿದ್ದು. ಸೋಂಕಿತ ಪ್ರಕರಣಗಳಲ್ಲಿ ಮೊದಲ ಸ್ಥಾನದಲ್ಲಿದೆ. ಇಲ್ಲಿ 18 ಲಕ್ಷದ 59ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿತರಿದ್ದು, 1 ಲಕ್ಷದ 06ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರ ಪಟ್ಟಿಯಲ್ಲಿ ಕೂಡ ಮೊದಲನೇ ಸ್ಠಾನದಲ್ಲಿದೆ. -ಬ್ರೆಜಿಲ್ ಸೋಂಕಿತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಏರಿದ್ದು, ಇಲ್ಲಿ 5 ಲಕ್ಷದ 29 ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣ ಬೆಳಕಿಗೆ ಬಂದಿದೆ. 30,300 ಕ್ಕೂ ಹೆಚ್ಚು ಮಂದಿ ಇಲ್ಲಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಚಾರ್ಟ್ ನಲ್ಲಿ 4ನೇ ಸ್ಥಾನದಲ್ಲಿದೆ. -ರಷ್ಯ ಸೋಂಕಿತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. 4 ಲಕ್ಷದ 14 ಸಾವಿರ ಮಂದಿ ಇಲ್ಲಿ ಸೋಂಕಿತರಿದ್ದಾರೆ. 4,800ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

-ಸೋಂಕಿತ ಪ್ರಕರಣಗಳಲ್ಲಿ 4ನೇ ಸ್ಥಾನದಲ್ಲಿರುವ ಸ್ಪೇನ್ ನಲ್ಲಿ 2 ಲಕ್ಷದ 86ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ. 27,200ಕ್ಕೂ ಹೆಚ್ಚು ಮಂದಿ ಕೊರೊನಾಗೆ ಇಲ್ಲಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಚಾರ್ಟ್ ನಲ್ಲಿ 6ನೇ ಸ್ಥಾನದಲ್ಲಿದೆ. - ಯುಕೆ ಸೋಂಕಿತರ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಇಳಿದಿದೆ. ಇಲ್ಲಿ 2ಲಕ್ಷದ 76ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. 39,000ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿ ತಿಳಿಸಿದೆ. ಮೃತಪಟ್ಟವರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. -ಸೋಂಕಿತರ ಪಟ್ಟಿಯಲ್ಲಿ ಇಟಲಿ 6ನೇ ಸ್ಥಾನದಲ್ಲಿದ್ದು, ಮೃತಪಟ್ಟವರ ಚಾರ್ಟ್ ನಲ್ಲಿ 3ನೇ ಸ್ಥಾನದಲ್ಲಿದೆ. ಇಲ್ಲಿ 2ಲಕ್ಷದ 33ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. 33,400ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿ ತಿಳಿಸಿದೆ. -ಭಾರತವ ಸೋಂಕಿತ ಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿದ್ದರೆ. ಫ್ರಾನ್ಸ್ ಸೋಂಕಿತರ ಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಇಳಿದಿದೆ, ಇಲ್ಲಿ 1 ಲಕ್ಷದ 89 ಸಾವಿರ ಸೋಂಕಿತ ಪ್ರಕರಣ ಬೆಳಕಿಗೆ ಬಂದಿದೆ. 28,800ಕ್ಕೂ ಹೆಚ್ಚು ಮಂದಿ ಇಲ್ಲಿ ಸಾವನ್ನಪ್ಪಿ, ಮೃತಪಟ್ಟವರ ಚಾರ್ಟ್ ನಲ್ಲಿ 5ನೇ ಸ್ಥಾನದಲ್ಲಿದೆ.


from India & World News in Kannada | VK Polls https://ift.tt/2Xojxzh

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...