ಅನುಮತಿ ಇಲ್ಲದೇ ಸೈಕಲ್ ರ‍್ಯಾಲಿ: ದಿಗ್ವಿಜಯ್ ಸೇರಿ 150 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್!

ಭೋಪಾಲ್: ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ಏರಿಸುತ್ತಿರುವ ಕ್ರಮ ಖಂಡಿಸಿ ನಿನ್ನೆ(ಬುಧವಾರ) ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ನಡೆಸಿದ್ದರು. ಆದರೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರೊಂದಿಗೆ ಸೈಕಲ್ ರ‍್ಯಾಲಿ ನಡೆಸಿದ್ದ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನುಮತಿ ಇಲ್ಲದೇ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ಸೈಕಲ್ ರ‍್ಯಾಲಿ ನಡೆಸಿದ ಆರೋಪದ ಮೇಲೆ ದಿಗ್ವಿಜಯ್ ಸಿಂಗ್ ಹಾಗೂ 150ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಇದೀಗ ಎಫ್‌ಐಆರ್ ದಾಖಲಿಸಲಾಗಿದೆ. ಕೊರೊನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಲಾಕ್‌ಡೌನ್ ಹೇರಲಾಗಿದ್ದು, ಇದನ್ನು ಉಲ್ಲಂಘಿಸಿ ದಿಗ್ವಿಜಯ್ ಸಿಂಗ್ ಪ್ರತಿಭಟನೆ ನಡೆಸಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ. ಅನುಮತಿ ಇಲ್ಲದೇ ಪ್ರತಿಭಟನೆ ಹಾಗೂ ಮುಖ್ಯಮಂತ್ರಿಗಳ ನಿವಾಸದತ್ತ ಸೈಕಲ್ ರ‍್ಯಾಲಿ ನಡೆಸಲು ಪ್ರಯತ್ನಿಸಿದ ಆರೋಪದ ಮೇಲೆ ದಿಗ್ವಿಜಯ್ ಸಿಂಗ್ ಹಾಗೂ 150ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದಕ್ಕೂ ಮೊದಲು ನಿನ್ನೆಯ ಪ್ರತಿಭಟನೆಯಲ್ಲಿ ಮಾತನಾಡಿದ್ದ ದಿಗ್ವಿಜಯ್ ಸಿಂಗ್, ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡಿಸೆಲ್ ದರಗಳನ್ನು ನಿರಂತರವಾಗಿ ಏರಿಕೆ ಮಾಡುವ ಮೂಲಕ ಜನಸಾಮಾನ್ಯರಿಗೆ ತೊಂದರೆ ಕೊಡುತ್ತಿದೆ ಎಂದು ಹರಿಹಾಯ್ದಿದ್ದರು.


from India & World News in Kannada | VK Polls https://ift.tt/3fQMkCE

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...