ನವದೆಹಲಿ: ಆಘಾತಕಾರಿ ಬೆಳವಣಿಗೆಯೊಂದರಲ್ಲಿ ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕೇವಲ ಒಂದೇ ದಿನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 20 ಸಾವಿರ ಸಮೀಪಕ್ಕೆ ಬಂದು ತಲುಪಿದೆ. ಕೇವಲ ಒಂದು ದಿನದಲ್ಲಿ ದೇಶದಲ್ಲಿ ಬರೋಬ್ಬರಿ 19,906 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಒಟ್ಟು 5,28,859 ಕೊರೊನಾ ಪ್ರಕರಣಗಳು ದಾಖಲಾಗಿವೆ. ಈ ಕುರಿತು ಮಾಹಿತಿ ನೀಡಿರುವ ಕೇಂದ್ರ , ಒಂದೇ ದಿನದಲ್ಲಿ 410 ಕೊರೊನಾ ವೈರಸ್ ಸಂಬಂಧಿತ ಸಾವುಗಳು ಸಂಭವಿಸಿವೆ ಎಂದು ಸ್ಪಷ್ಟಪಡಿಸಿದೆ. ಈ ಮೂಲಕ ದೇಶದಲ್ಲಿ ಮಾರಕ ಕೊರೊನಾ ವೈರಸ್ಗೆ ಒಟ್ಟು 16,095 ಜನ ಬಲಿಯಾಗಿದ್ದಾರೆ. 24 ಗಂಟೆಗಳಲ್ಲಿ ಇಷ್ಟೊಂದು ಭಾರೀ ಪ್ರಮಾಣದಲ್ಲಿ ಕೊರೊನಾ ವೈರಸ್ ಪ್ರಕರಣ ಹಾಗೂ ಸಾವುಗಳ ಸಂಖ್ಯೆ ದಾಖಲಾಗಿರುವುದು ಇದೇ ಮೊದಲು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಸದ್ಯ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ವಿಶ್ವದ ರಾಷ್ಟ್ರಗಳ ಪೈಕಿ ನಾಲ್ಕನೇ ಸ್ಥಾನದಲ್ಲಿದ್ದು, ಸೋಂಕಿತರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಆತಂಕದ ಸಂಗತಿಯಾಗಿದೆ. ದೇಶದ ಕೊರೊನಾ ವೈರಸ್ ಸ್ಥಿತಿಗತಿಯ ಸಂಕ್ಷಿಪ್ತ ಚಿತ್ರಣ ಇಲ್ಲಿದೆ: ಒಟ್ಟು ಸೋಂಕಿತರು: 5,28,859 24 ಗಂಟೆಗಳಲ್ಲಿ ಸೋಂಕಿತರ ಸಂಖ್ಯೆ: 19,906 ಒಟ್ಟು ಸಾವು: 16,095 24 ಗಂಟೆಗಳಲ್ಲಿ ದಾಖಲಾದ ಸಾವು: 410 ದೇಶದ ಒಟ್ಟು ಶೇ. 87ರಷ್ಟು ಸಾವು ಕೇವಲ 8 ರಾಜ್ಯಗಳಲ್ಲಿ ದಾಖಲಾಗಿದವೆ. ಮಹಾರಾಷ್ಟ್ರವೊಂದರಲ್ಲೇ ಸುಮಾರು 1,59,133 ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿವೆ. ರಾಷ್ಟ್ರ ರಾಜಧಾನಿಯಲ್ಲಿ ಒಟ್ಟು 80,000 ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿವೆ. ಅತಿ ಹೆಚ್ಚು ಕೊರೊನಾ ವೈರಸ್ ಹಾವಳಿ ಇರುವ ದೇಶಗಳು:
- ಅಮೆರಿಕ
- ಬ್ರೆಜಿಲ್
- ರಷ್ಯಾ
- ಭಾರತ
from India & World News in Kannada | VK Polls https://ift.tt/38bTLSC