ಶ್ರೀನಗರ: ಕಣಿವೆಯಲ್ಲಿ ಉಗ್ರರ ಸಂಹಾರ ಮುಂದುವರೆದಿದ್ದು, ಕೇವಲ 24 ಗಂಟೆಗಳಲ್ಲಿ 8 ಭಯೋತ್ಪಾದಕರನ್ನು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿವೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಒಟ್ಟು 8 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮುಖ್ಯಸ್ಥ ದಿಲ್ಬಾಗ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಈ ಪೈಕಿ ಪಾಂಪೋರ್‌ನ ಜಾಮಿಯಾ ಮಸೀದಿಯಲ್ಲಿ ಅಡಗಿದ್ದ ಇಬ್ಬರು ಉಗ್ರರನ್ನೂ ಭದ್ರತಾ ಪಡೆಗಳು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿವೆ ಎಂದು ದಿಲ್ಬಾಗ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಮಸೀದಿಯಲ್ಲಿ ಅಡಗಿದ್ದ ಉಗ್ರರ ಮೇಲೆ ನಡೆದ ದಾಳಿಯ ಸಂದರ್ಭದಲ್ಲಿ ಧಾರ್ಮಿಕ ಕಟ್ಟಡಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ದಿಲ್ಬಾಗ್ ಸಿಂಗ್ ಸ್ಪಷ್ಟಪಡಿಸಿದ್ದು, ಅತ್ಯಂತ ಕರಾರುವಕ್ಕಾಗಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ಮಸೀದಿಯಲ್ಲಿ ಅಡಗಿದ್ದ ಭಯೋತ್ಪಾದಕರನ್ನು ಮೊದಲು ಮಸೀದಿ ಬಿಟ್ಟು ಹೊರಬರುವ ಅನಿವಾರ್ಯತೆ ಸೃಷ್ಟಿಸಿದ ಭದ್ರತಾ ಪಡೆಗಳು, ನಂತರ ಇಬ್ಬರನ್ನೂ ಹೊಡೆದುರುಳಿಸುವಲ್ಲಿ ಯಶಸ್ವಿಯಾದವು. ಇನ್ನು ಮಸೀದಿಗೆ ಏನೂ ಹಾನಿಯಾಗದಂತೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದರಿಂದ ಸ್ಥಳೀಯರು ಸಂತಸಗೊಂಡಿದ್ದಲ್ಲದೇ ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಕಣಿವೆಯಲ್ಲಿ ಉಗ್ರರ ಸಂಹಾರ ಮುಂದುವರೆದಿದ್ದು, ಕಣಿವೆಯನ್ನು ಉಗ್ರವಾದದಿಂದ ಮುಕ್ತಗೊಳಿಸಿರುವ ಕೇಂದ್ರ ಸರ್ಕಾರದ ನೀತಿಯನ್ನು ಅತ್ಯಂತ ಯಶಸ್ವಿಯಾಗಿ ಜಾರಿಗೆ ತರಲಾಗುತ್ತಿದೆ.
from India & World News in Kannada | VK Polls https://ift.tt/3fC89FX