ಕೊರೊನಾ ಲೈವ್ ಅಪ್‌ಡೇಟ್ಸ್: ವಿಶ್ವದಾದ್ಯಂತ 3 ಲಕ್ಷದ 93ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಲಿ!

ಚೀನಾದ ವುಹಾನ್ ನಲ್ಲಿ ಮೊದಲು ಪತ್ತೆಯಾಗಿದ್ದ ವಿಶ್ವಾದ್ಯಂತ 3ಲಕ್ಷದ 93 ಸಾವಿರಕ್ಕೂ ಹೆಚ್ಚು ಮಂದಿಯನ್ನು ಬಲಿಪಡೆದಿದೆ. ಭಾರತದಲ್ಲಿ ಪಾಸಿಟಿವ್ ಪ್ರಕರಣ 2ಲಕ್ಷದ 26ಸಾವಿರ ದಾಟಿದೆ. ಜೂನ್ 5ರ ಕ್ಷಣಕ್ಷಣದ ಮಾಹಿತಿ ಇಲ್ಲಿದೆ:- -ಕರ್ನಾಟಕದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ 4,320 ಕ್ಕೆ ಏರಿಕೆಯಾಗಿದೆ. 57ಮಂದಿಯ ಸಾವಾಗಿದ್ದು, 1,610ಮಂದಿ ಗುಣಮುಖರಾಗಿದ್ದಾರೆ. ಸೋಂಕಿತ ಪ್ರಕರಣಗಳ ಪಟ್ಟಿಯಲ್ಲಿ ರಾಜ್ಯ 11ನೇ ಸ್ಥಾನದಲ್ಲಿದೆ.

-ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಸೋಂಕಿತರ ಸಂಖ್ಯೆ 2,26,713ಕ್ಕೆ ಏರಿಕೆಯಾಗಿದೆ. 1,08,450ಮಂದಿ ಗುಣಮುಖರಾಗಿದ್ದು, 6,363ಮಂದಿ ಸಾವನ್ನಪ್ಪಿದ್ದಾರೆ. ಸೋಂಕಿತ ಪ್ರಕರಣದ ದೇಶಗಳ ಪಟ್ಟಿಯಲ್ಲಿ ಭಾರತ 7ನೇ ಸ್ಥಾನದಲ್ಲಿದೆ. ಗುರುವಾರ ಒಂದೇ ದಿನ 9,838 ಸೋಂಕಿತ ಪ್ರಕರಣ ಬೆಳಕಿಗೆ ಬಂದಿದೆ.

-ವಿಶ್ವದಾದ್ಯಂತ 3 ಲಕ್ಷದ 93ಸಾವಿರಕ್ಕೂ ಹೆಚ್ಚು ಜನರನ್ನು ಬಲಿ ಪಡೆದಿದೆ. 66 ಲಕ್ಷದ 98 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ. ಇದರಲ್ಲಿ 32ಲಕ್ಷದ 44 ಸಾವಿರಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. -ಅಮೆರಿಕದಲ್ಲಿ ಅತೀ ಹೆಚ್ಚು ಮಂದಿ ಸೋಂಕಿಗೆ ಒಳಗಾಗಿದ್ದು. ಸೋಂಕಿತ ಪ್ರಕರಣಗಳಲ್ಲಿ ಮೊದಲ ಸ್ಥಾನದಲ್ಲಿದೆ. ಇಲ್ಲಿ 19 ಲಕ್ಷದ 24ಸಾವಿರಕ್ಕೂ ಹೆಚ್ಚು ಮಂದಿ ಸೋಂಕಿತರಿದ್ದು, 1 ಲಕ್ಷದ 10ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟವರ ಪಟ್ಟಿಯಲ್ಲಿ ಕೂಡ ಮೊದಲನೇ ಸ್ಠಾನದಲ್ಲಿದೆ. -ಬ್ರೆಜಿಲ್ ಸೋಂಕಿತರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಏರಿದ್ದು, ಇಲ್ಲಿ 6ಲಕ್ಷದ 15 ಸಾವಿರಕ್ಕೂ ಹೆಚ್ಚು ಸೋಂಕಿತ ಪ್ರಕರಣ ಬೆಳಕಿಗೆ ಬಂದಿದೆ. 34,000 ಕ್ಕೂ ಹೆಚ್ಚು ಮಂದಿ ಇಲ್ಲಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಚಾರ್ಟ್ ನಲ್ಲಿ 4ನೇ ಸ್ಥಾನದಲ್ಲಿದೆ. -ರಷ್ಯ ಸೋಂಕಿತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. 4 ಲಕ್ಷದ 41 ಸಾವಿರ ಮಂದಿ ಇಲ್ಲಿ ಸೋಂಕಿತರಿದ್ದಾರೆ. 5,300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

-ಸೋಂಕಿತ ಪ್ರಕರಣಗಳಲ್ಲಿ 4ನೇ ಸ್ಥಾನದಲ್ಲಿರುವ ಸ್ಪೇನ್ ನಲ್ಲಿ 2 ಲಕ್ಷದ 87ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ. 27,100ಕ್ಕೂ ಹೆಚ್ಚು ಮಂದಿ ಕೊರೊನಾಗೆ ಇಲ್ಲಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಚಾರ್ಟ್ ನಲ್ಲಿ 6ನೇ ಸ್ಥಾನದಲ್ಲಿದೆ. - ಯುಕೆ ಸೋಂಕಿತರ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಇಳಿದಿದೆ. ಇಲ್ಲಿ 2ಲಕ್ಷದ 81ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. 39,900ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿ ತಿಳಿಸಿದೆ. ಮೃತಪಟ್ಟವರ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. -ಸೋಂಕಿತರ ಪಟ್ಟಿಯಲ್ಲಿ ಇಟಲಿ 6ನೇ ಸ್ಥಾನದಲ್ಲಿದ್ದು, ಮೃತಪಟ್ಟವರ ಚಾರ್ಟ್ ನಲ್ಲಿ 3ನೇ ಸ್ಥಾನದಲ್ಲಿದೆ. ಇಲ್ಲಿ 2ಲಕ್ಷದ 39ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಇರುವುದು ದೃಢಪಟ್ಟಿದೆ. 33,600ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಬಗ್ಗೆ ವರದಿ ತಿಳಿಸಿದೆ.


from India & World News in Kannada | VK Polls https://ift.tt/30bcMlW

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...