ಕೊರೊನಾ ಕೋಲಾಹಲ: ಜುಲೈ 31ರವರೆಗೆ ಲಾಕ್‌ಡೌನ್ ವಿಸ್ತರಿಸಿದ ಪಶ್ಚಿಮ ಬಂಗಾಳ!

ಕೋಲ್ಕತ್ತಾ: ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ವೈರಸ್ ಹಾವಳಿಯ ಪರಿಣಾಮವಾಗಿ, ಈ ಜೂನ್ 30ರದು ಕೊನೆಗೊಳ್ಳಬೇಕಿದ್ದ ಲಾಕ್‌ಡೌನ್ ಅವಧಿಯನ್ನು ಜುಲೈ 31ಕ್ಕೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ನಿನ್ನೆ(ಬುಧವಾರ) ನಡೆದ ಸರ್ವಪಕ್ಷ ಸಭೆ ಬಳಿಕ, ಮುಖ್ಯಮಂತ್ರಿ ಲಾಕ್‌ಡೌನ್ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸುವ ನಿರ್ಧಾರ ಪ್ರಕಟಿಸಿದರು. ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಹಾಗೂ ಸಾವಿನ ಸಂಖ್ಯೆಯಲ್ಲೂ ಏರಿಕೆ ಕಂಡುಬರುತ್ತಿರುವುದರಿಂದ ಲಾಕ್‌ಡೌನ್ ಅವಧಿಯನ್ನು ವುಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಮತಾ ಬ್ಯಾನರ್ಜಿ ಸ್ಪಷ್ಟಪಡಿಸಿದ್ದಾರೆ. ಇದೇ ಜೂನ್ 30ರಂದು ಕೊನೆಗೊಳ್ಳಬೇಕಿದ್ದ ಲಾಕ್‌ಡೌನ್ ಅವಧಿಯನ್ನು ಇದೀಗ ಜುಲೈ 31ಕ್ಕೆ ವಿಸ್ತರಿಸಲಾಗಿದ್ದು, ಕೊರೊನಾ ವೈರಸ್ ನಿಯಂತ್ರಣಕ್ಕೆ ಸಾಧ್ಯವಾದ ಎಲ್ಲಾ ಪ್ರಯತ್ನಗಳನ್ನು ಮಾಡುವ ನಿರ್ಣಯ ಕೈಗೊಳ್ಳಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಒಟ್ಟು 15,173 ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಈ ಮಾರಕ ವೈರಾಣುವಿಗೆ ಇದುವರೆಗೂ ಒಟ್ಟು 591 ಜನ ಬಲಿಯಾಗಿದ್ದಾರೆ. ಇನ್ನು ಸಭೆಯಲ್ಲಿ ಅಂಫಾನ್ ಚಂಡಮಾರುತದ ಪರಿಹಾರ ನಿಧಿ ವಿತರಣೆಯಲ್ಲಿ ಆಗುತ್ತಿರುವ ಅನ್ಯಾಯದ ಕುರಿತು ಚರ್ಚೆ ನಡೆದಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೈಜ ಫಲಾನುಭವಿಗಳನ್ನು ಗುರುತಿಸಿ ಪರಿಹಾರ ನೀಡುವ ಕುರಿತು ವಿಪಕ್ಷಗಳಿಗೆ ಭರವಸೆ ನೀಡಿದ್ದಾರೆ ಎನ್ನಲಾಗಿದೆ.


from India & World News in Kannada | VK Polls https://ift.tt/37XXBhW

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...