ಕಾಶ್ಮೀರದಲ್ಲಿ ಮೂವರು ಉಗ್ರರು ಎನ್‌ಕೌಂಟರ್‌ಗೆ ಬಲಿ

ಜಮ್ಮು ಕಾಶ್ಮೀರ: ಭಾರತೀಯ ಸೇನೆ ಮತ್ತು ಉಗ್ರರ ನಡುವೆ ನಡೆದ ಕದನದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಸೈನಿಕರು ಯಶಸ್ವಿಯಾಗಿದ್ದಾರೆ. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಉಗ್ರರು ಮತ್ತು ಭಾರತೀಯ ಸೈನಿಕರ ನಡುವೆ ಹೋರಾಟ ನಡೆದಿದ್ದು, ನಿನ್ನೆ ಸಂಜೆಯಿಂದ ನಡೆಯುತ್ತಿದ್ದ ಕಾರ್ಯಾಚರಣೆ ಇಂದು ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಅಂತ್ಯ ಕಂಡಿದೆ. ಘಟನೆಯಲ್ಲಿ ಇಬ್ಬರು ಭಾರತೀಯ ಸೈನಿಕರಿಗೆ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪುಲ್ವಾಮಾ ಜಿಲ್ಲೆಯ ಟ್ರಾಲ್ ಪ್ರದೇಶದಲ್ಲಿ ಉಗ್ರ ಚಟುವಟಿಕೆ ನಡೆಯುತ್ತಿರುವುದರ ಬಗ್ಗೆ ಖಚಿತ ಮಾಹಿತಿ ಪಡೆದ ಸೇನೆ, ಉಗ್ರರನ್ನು ಮಟ್ಟ ಹಾಕಲು ಪ್ಲ್ಯಾನ್ ರೂಪಿಸಿತ್ತು. ಅದರನ್ವಯ, ಕಾಶ್ಮೀರದ ಪೊಲೀಸ್, 42 ರಾಷ್ಟ್ರೀಯ ರೈಫಲ್ ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಜೊತೆಗಿನ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರನ್ನು ಹೊಡೆದುರುಳಿಸಲು ಸಫಲರಾಗಿದ್ದಾರೆ. ಮೂಲಗಳ ಪ್ರಕಾರ, ಉಗ್ರರಿಗೆ ಶರಣಾಗಲು ಸೈನಿಕರು ತಿಳಿಸಿದ್ದಾರೆ, ಆದರೆ ಅವರು ಸೈನಿಕರ ಮೇಲೆಯೇ ಗುಂಡಿನ ದಾಳಿ ನಡೆಸಲು ಯತ್ನಿಸಿದಾಗ ಭದ್ರತಾ ಪಡೆ ಅವರನ್ನು ಎನ್‌ಕೌಂಟರ್ ಮಾಡಿದೆ. ದಕ್ಷಿಣ ಕಾಶ್ಮೀರ ಭಾಗದಲ್ಲಿ ಒಂದೇ ತಿಂಗಳ ಅವಧಿಯಲ್ಲಿ ನಡೆದ ಹನ್ನೆರಡನೇ ಎನ್‌ಕೌಂಟರ್ ಇದಾಗಿದ್ದು, ಸುಮಾರು 33 ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.


from India & World News in Kannada | VK Polls https://ift.tt/2Ny6OEq

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...