ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕ್ವಾರಂಟೈನ್ ಮಾರ್ಗಸೂಚಿಯಲ್ಲಿ ರಾಜ್ಯ ಸರ್ಕಾರ ಮತ್ತೆ ಬದಲಾವಣೆಯನ್ನು ಮಾಡಿದೆ. ಈಗಾಗಲೇ ಜಾರಿಯಲ್ಲಿರುವ ಕ್ವಾರಂಟೈನ್ ಮಾರ್ಗಸೂಚಿಯನ್ನು ಪರಿಷ್ಕರಣೆ ಮಾಡಿ ಹೊಸತೊಂದು ಆದೇಶವನ್ನು ಸರ್ಕಾರ ಹೊರಡಿಸಿದೆ. ಸರ್ಕಾರದ ಹೊಸ ಆದೇಶದ ಪ್ರಕಾರ ಮಹಾರಾಷ್ಟ್ರದಿಂದ ಆಗಮಿಸುವವರಿಗೆ 7 ದಿನ ಸಾಂಸ್ಥಿಕ ಕ್ವಾರಂಟೈನ್ ಹಾಗೂ 7 ದಿನಗಳ ಕಾಲ ಗೃಹ ಕ್ವಾರಂಟೈನ್ ಮಾಡಬೇಕಿದೆ. ಮಹಾರಾಷ್ಟ್ರದಿಂದ ಬರುವವರಲ್ಲಿ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರವನ್ನು ಕೈಗೊಂಡಿದೆ. ಇನ್ನು ಮಹಾರಾಷ್ಟ್ರ ಹೊರತಾಗಿ ಇತರ ರಾಜ್ಯಗಳಿಂದ ಬರುವವರು ಸಾಂಸ್ಥಿಕ ಕ್ವಾರಂಟೈನ್ ಬದಲು 14 ದಿನಗಳ ಕಾಲ ಗೃಹ ಕ್ವಾರಂಟೈನ್ ಪಾಲನೆ ಮಾಡುವಂತೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತಿದೆ. ಅದರಲ್ಲೂ ಬೆಂಗಳೂರು ನಗರದಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಸೋಂಕು ನಿಯಂತ್ರಣ ಮಾಡಲು ಸಾಕಷ್ಟು ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದೆ.
from India & World News in Kannada | VK Polls https://ift.tt/2B7JXgo