ಬೆಂಗಳೂರು: ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ವ್ಯಾಪಾರ ನಡೆಸುವ ಪ್ರದೇಶಗಳಲ್ಲಿ ಸೀಲ್‌ಡೌನ್ ಮಾಡುವ ವಿಚಾರದಲ್ಲಿ ತಾರತಮ್ಯ ನಡೆಸುತ್ತಿದೆ ಎಂದು ಚಿಕ್ಕಪೇಟೆ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ನಗರದಲ್ಲಿ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಕೆಲವು ಪ್ರದೇಶಗಳನ್ನು ಸೀಲ್‌ಡೌನ್ ಮಾಡುತ್ತಿದೆ. ಚಿಕ್ಕಪೇಟೆ, ಬಳೆಪೇಟೆ, ಸುಲ್ತಾನ್ ಪೇಟೆ, ಅಕ್ಕಿಪೇಟೆ ಅಕ್ಕಪಕ್ಕದ ಪ್ರದೇಶಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಏಳು ದಿನಗಳ ಕಾಲ ಚಿಕ್ಕಪೇಟೆಯಲ್ಲಿ ಯಾವುದೇ ವ್ಯಾಪಾರ ವಹಿವಾಟು ನಡೆಸದಂತೆ ಬಿಬಿಎಂಪಿ ಸೂಚನೆ ನೀಡಿದೆ. ಆದರೆ ಅದರ ಪಕ್ಕದ ಬಳೆಪೇಟೆ, ಸುಲ್ತಾನ್ ಪೇಟೆ, ಅಕ್ಕಿಪೇಟೆ, ಮಾಮೂಲ್ ಪೇಟೆಗಳಲ್ಲಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಿಬಿಎಂಪಿ ಈ ನಡೆ ಚಿಕ್ಕಪೇಟೆ ವ್ಯಾಪಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಅವಕಾಶ ಕೊಡುವುದಾದರೆ ಎಲ್ಲರಿಗೂ ಕೊಡಿ ಬದಲಾಗಿ ತಾರತಮ್ಯ ಮಾಡುವುದು ಸರಿಯಲ್ಲ ಎಂದು ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೀಲ್‌ಡೌನ್ ಆದರೂ ಈ ಪ್ರದೇಶದಲ್ಲಿ ವ್ಯಾಪಾರಕ್ಕೆ ಕೆಲವು ವ್ಯಾಪಾರಿಗಳು ಮುಂದಾಗಿದ್ದಾರೆ. ಆದರೆ ಬಿಬಿಎಂಪಿ ಇದುವರೆಗೂ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ. ನಗರದಲ್ಲಿ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್ ಮಾರ್ಕೆಟ್ ಸೇರಿದಂತೆ ಜನ ಸಂಚಾರ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
from India & World News in Kannada | VK Polls https://ift.tt/3fVnUrE