ಜಮ್ಮು ಮತ್ತು ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನ ಹತ್ಯೆ

ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮಂಗಳವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರನನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದೆ. ದಕ್ಷಿಣ ಕಾಶ್ಮೀರದ ಟ್ರಾಲ್‌ನ ಸಮೋಹ್ ಗ್ರಾಮದಲ್ಲಿ ಭದ್ರತಾ ಪಡೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರನನ್ನು ಸದೆಬಡಿಯುವಲ್ಲಿ ಸೇನೆ ಯಶಸ್ವಿಯಾಗಿದೆ. ಪ್ರಸ್ತುತ ಪ್ರದೇಶದಲ್ಲಿ ಕಾರ್ಯಾಚರಣೆ ಈಗಲೂ ಜಾರಿಯಲ್ಲಿದೆ. ಪೊಲೀಸರ ನೆರವಿನೊಂದಿಗೆ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿದೆ. ಶನಿವಾರದಿಂದ ಈ ಪ್ರದೇಶದಲ್ಲಿ ನಡೆಯುತ್ತಿರುವ ಮೂರನೇ ಇದಾಗಿದೆ. ಪುಲ್ವಾಮ ಜಿಲ್ಲೆಯ ಅವಂತಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಕಳೆದ ದಿನವಷ್ಟೇ ಗಡಿ ನುಸುಳಲು ಬಂದ 13 ಉಗ್ರರನ್ನು ಭಾರತೀಯ ಭದ್ರತಾ ಪಡೆಯು ಹತ್ಯೆಗೈದಿತ್ತು. ಪಾಕ್ ಆಕ್ರಮಿತ ಕಾಶ್ಮೀರ ಮೂಲಕ ಬಂದ 10 ಕಲಾಲ್ ಗ್ರಾಮ ಸಮೀಪದ ಗಡಿ ನುಸುಳಲು ಯತ್ನಿಸಿದ್ದರು. ಈ ವೇಳೆ ಭದ್ರತಾ ಪಡೆ ಎನ್‌ಕೌಂಟರ್ ನಡೆಸಿದೆ. ಮಗದೊಂದು ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಸದೆ ಬಡಿಯುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿತ್ತು.


from India & World News in Kannada | VK Polls https://ift.tt/3coUS1y

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...