ರೈತ ಆತ್ಮಹತ್ಯೆ: ಉತ್ತರ ಪ್ರದೇಶ ಸರ್ಕಾರದ ವಿರುದ್ಧ ತಿರುಗಿ ಬಿದ್ದ ಪ್ರಿಯಾಂಕ ಗಾಂಧಿ

ಹೊಸದಿಲ್ಲಿ: ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಸದ ಹಿನ್ನೆಲೆಯಲ್ಲಿ ಮಾಡಿಕೊಂಡಿರುವ ಕುರಿತು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯವರು ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹಿಂದಿಯಲ್ಲಿ ಸರಣಿ ಟ್ವೀಟ್‌ ಮಾಡಿರುವ ಪೂರ್ವ ಉತ್ತರ ಪ್ರದೇಶದ ಪಕ್ಷದ ಉಸ್ತುವಾರಿಯೂ ಆಗಿರುವ ಪ್ರಿಯಾಂಕ ಗಾಂಧಿ,"ತೋಟದಲ್ಲಿ ಕಬ್ಬು ಒಣಗುತ್ತಿರುವುದಕ್ಕೆ ಹಾಗೂ ಸರ್ಕಾರದಿಂದ ಬಾಕಿ ಹಣ ಸಿಗದ ಕಾರಣಕ್ಕಾಗಿ ನೊಂದ ಮುಜಾಫರ್‌ ನಗರದ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. 14 ದಿನಗಳಲ್ಲಿ ಪೂರ್ಣ ಪ್ರಮಾಣದ ಹಣ ನೀಡುತ್ತೇವೆಂದು ಬಿಜೆಪಿ ಸರ್ಕಾರ ಹೇಳಿತ್ತು. ಆದರೆ, ಸಾವಿರಾರು ಕೋಟಿ ರೂ. ಬಾಕಿ ಇರುವುದರಿಂದ ಸಕ್ಕರೆ ಕಾರ್ಖಾನೆಗಳು ಮುಚ್ಚಲಾಗಿದೆ," ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ಕಳೆದ ಎರಡು ದಿನಗಳ ಹಿಂದೆ ಸರ್ಕಾರಕ್ಕೆ ಈ ಬಗ್ಗೆ ತಿಳಿಸಿದ್ದೆ. ಬಾಕಿ ಹಣ ಸಿಗದೆ ಆರ್ಥಿಕ ಸಮಸ್ಯೆಗೆ ಸಿಲುಕಿರುವ ರೈತರ ಪರಿಸ್ಥತಿ ಹೇಗಿರುತ್ತದೆ ಎಂದು ಊಹೆ ಮಾಡಲು ಸಾಧ್ಯವಿಲ್ಲ. ಆದರೆ, 14 ದಿನಗಳಲ್ಲಿ ಕಬ್ಬು ಬೆಳೆಗಾರರಿಗೆ ಬಾಕಿ ಮೊತ್ತ ಪಾವತಿಸುತ್ತೇವೆಂದು ಹೇಳಿದ್ದ ಬಿಜೆಪಿ ಇದೀಗ ತುಟಿ ಬಿಚ್ಚುತ್ತಿಲ್ಲ," ಎಂದು ಪ್ರಿಯಾಂಕ ಟೀಕಿಸಿದರು. ಮುಜಾಫರ್‌ನಗರದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ವರದಿ ಸಮೇತ ಪ್ರಿಯಾಂಕ ಗಾಂಧಿ ಟ್ವೀಟ್‌ ಮಾಡಿದ್ದಾರೆ. ಕಾಂಗ್ರೆಸ್‌ ಪಕ್ಷದ ನಾಯಕಿ ಉತ್ತರ ಪ್ರದೇಶದ ಈ ಸಮಸ್ಯೆ ಕುರಿತು ಕಳೆದ ಒಂದೂವರೆ ವರ್ಷದಿಂದಲೂ ಧನಿ ಎತ್ತುತ್ತಿದ್ದಾರೆ.


from India & World News in Kannada | VK Polls https://ift.tt/3dBIixw

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...