ನವದೆಹಲಿ: ಮಾರಕ ಕೊರೊನಾ ವೈರಸ್ ಹಾವಳಿಯ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಎರಡನೇ ಸುತ್ತಿನ ಮೂಲಕ ಮಾತುಕತೆ ನಡೆಸಿದ್ದಾರೆ. ನಿನ್ನೆ(ಜೂನ್ 16)ಯೂ ದೇಶದ 21 ರಾಜ್ಯಗಳ ಹಾಗೂ 3 ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದ್ದ ಪ್ರಧಾನಿ ಮೋದಿ, ಇಂದೂ(ಬುಧವಾರ)ಕೂಡ 15 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದರು. ಸಭೆ ಆರಂಭಕ್ಕೂ ಮುನ್ನ ಭಾರತ-ಚೀನಾ ಸೈನಿಕರ ಘರ್ಷಣೆಯಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ಪ್ರಧಾನಿ ಮೋದಿ ಶ್ರದ್ಧಾಂಜಲಿ ಸಲ್ಲಿಸಿದರು. ಈ ವೇಳೆ ಎಲ್ಲರೂ ಎದ್ದು ನಿಂತು ಒಂದು ನಿಮಿಷ ಮೌನಾಚರಣೆ ಆಚರಿಸಿದರು. ಇಂದಿನ ಸಭೆಯಲ್ಲಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ ಪ್ರಧಾನಿ ಮೋದಿ, ವೈರಸ್ ಹಾವಳಿ ನಿಯಂತ್ರಿಸಲು ಈ ರಾಜ್ಯ ಸರ್ಕಾರಗಳು ಕೈಗೊಂಡಿರುವ ಕ್ರಮಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ದೇಶದಲ್ಲಿ ಕೊರೊನಾ ವೈರಸ್ ಹಾವಳಿ ವಿರುದ್ಧದ ಹೋರಾಟ ಮುಂದುವರೆದಿದ್ದು, ನಾವವೆಲ್ಲಾ ಒಟ್ಟಾಗಿ ಈ ಯುದ್ಧದಲ್ಲಿ ಜಯ ಸಾಧಿಸಲಿದ್ದೇವೆ ಎಂದು ಪ್ರಧಾನಿ ಮೋದಿ ಭರವಸೆ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳೊಂದಿಗಿನ ಪ್ರಧಾನಿ ಮೋದಿ ವಿಡಿಯೋ ಸಂವಾದದ ಪ್ರಮುಖ ಅಂಶಗಳು:
- ಗಡಿ ಘರ್ಷಣೆಯಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ.
- ನೆರೆಯ ದೇಶಗಳೊಂದಿಗೆ ಭಾರತ ಶಾಂತಿ ಬಯಸುತ್ತದೆ. ಆದರೆ ಸಾರ್ವಭೌಮತೆಗೆ ಧಕ್ಕೆ ಬಂದರೆ ಖಂಡಿತ ಸಹಿಸುವುದಿಲ್ಲ.
- ದೇಶಕ್ಕಾಗಿ ಪ್ರಾಣ ಅರ್ಪಿಸಿದ ವೀರ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಮೋದಿ ಭರವಸೆ.
- 15 ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಕರೊನಾ ವೈರಸ್ ನಿಯಂತ್ರಿಸಲು ಕೈಗೊಂಡ ಕ್ರಮಗಳ ಕುರಿತು ಪ್ರಧಾನಿ ಚರ್ಚೆ.
- ದೇಶ ಒಂದಾಗಿ ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಜಯ ಸಾಧಿಸಲು ಸಿದ್ಧ.
- ಕೊರೊನಾ ವೈರಸ್ ಹಾವಳಿ ಹೆಚ್ಚಾಗಿರುವ ರಾಜ್ಯಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಮೂಲಕ ವೈರಾಣು ಹಾವಳಿಯನ್ನು ನಿಯಂತ್ರಣಕ್ಕೆ ತರಬೇಕು.
from India & World News in Kannada | VK Polls https://ift.tt/30PiASx