ರಾಜ್ಯಸಭಾ ಚುನಾವಣೆ: ಈ ಮೂವರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರು?

ಬೆಂಗಳೂರು: ರಾಜ್ಯದಲ್ಲಿ ರಾಜ್ಯಸಭಾ ಚುನಾವಣೆ ಗರಿಗೆದರಿದೆ. ಜೂನ್ 19 ಕ್ಕೆ ನಡೆಯಲಿರುವ ಚುನಾವಣೆಗೆ ಆಕಾಂಕ್ಷಿಗಳ ಪಟ್ಟಿಯೂ ದೊಡ್ಡದಿದೆ. ಪಾಲಿಗೆ ದಕ್ಕುವ ಒಂದು ಸ್ಥಾನಕ್ಕಾಗಿ ಪೈಪೋಟಿ ತೀವ್ರಗೊಂಡಿದೆ. ಘಟಾನುಘಟಿ ನಾಯಕರುಗಳು ಸ್ಪರ್ಧೆಗೆ ಪ್ರಯತ್ನ ನಡೆಸುತ್ತಿದ್ದು ಅಂತಿಮ ಆಯ್ಕೆ ಯಾರು ಎಂಬುವುದು ಕುತೂಹಲ ಸೃಷ್ಟಿಸಿದೆ. ರಾಜ್ಯಸಭೆಗೆ ಆಯ್ಕೆಯಾಗಲು ಹಲವು ನಾಯಕರು ತುದಿಕಾಲಲ್ಲಿ ನಿಂತಿದ್ದಾರೆ. ಅದರಲ್ಲೂ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ವಲಯದ ಬುದ್ದಿಜೀವಿ, ರಾಹುಲ್ ಗಾಂಧಿ ಆಪ್ತ ರಾಜೀವ್ ಗೌಡ ಹೆಸರು ಮುನ್ನೆಲೆಯಲ್ಲಿದೆ. ಜೊತೆಗೆ ವಿ.ಎಸ್ ಉಗ್ರಪ್ಪ, ಮಾಜಿ ಸಂಸದ ಮುದ್ದ ಹನುಮೇಗೌಡ ಅವರೂ ಸ್ಪರ್ಧೆ ನಡೆಸಲು ಪ್ರಯತ್ನ ಮಾಡುತ್ತಿದ್ದಾರೆ. ಮೂಲಗಳ ಪ್ರಕಾರ ರಾಜ್ಯದ ಮುಖಂಡರು ಮಲ್ಲಿಕಾರ್ಜುನ ಖರ್ಗೆ ಆಯ್ಕೆಗೆ ಹೆಚ್ಚಿನ ಒಲವನ್ನು ತೋರಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಪ್ರಮುಖ ಮುಖಂಡರು ಖರ್ಗೆ ಪರವಾಗಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡಾ ಖರ್ಗೆ ಆಯ್ಕೆಗೆ ವಿರೋಧ ವ್ಯಕ್ತಪಡಿಸಿಲ್ಲ ಎನ್ನಲಾಗಿದೆ. ಆದರೆ ಹೈಕಮಾಂಡ್‌ ವಲಯದಲ್ಲಿ ರಾಜೀವ್ ಗೌಡ ಹೆಸರು ಮುಂಚೂನಿಯಲ್ಲಿದೆ. ಪ್ರೊ. ರಾಜೀವ್ ಗೌಡ ರಾಹುಲ್ ಗಾಂಧಿ ಆಪ್ತ ವಲಯದಲ್ಲಿರುವ ರಾಜಕೀಯ ಸಲಹೆಗಾರರು ಹೌದು. ಈ ನಿಟ್ಟಿನಲ್ಲಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲು ರಾಹುಲ್ ಗಾಂಧಿ ಬಯಸಿದ್ದಾರೆ ಎಂಬ ಮಾಹಿತಿಯೂ ಇದೆ. ಈ ನಡುವೆ ಮುದ್ದಹನುಮೇಗೌಡರು ರಾಜ್ಯಸಭೆಗಾಗಿ ಲಾಬಿ ನಡೆಸುತ್ತಿದ್ದಾರೆ. ಎಚ್‌ಡಿ ದೇವೇಗೌಡರ ಸ್ಪರ್ಧೆಗಾಗಿ ತಮ್ಮ ಸ್ಥಾನವನ್ನು ತ್ಯಾಗ ಮಾಡಿದ ಅವರಿಗೆ ಪಕ್ಷದಲ್ಲಿ ಮಹತ್ವದ ಸ್ಥಾನ ನೀಡುವ ಭರವಸೆಯನ್ನು ನೀಡಲಾಗಿತ್ತು. ಆದರೆ ಇದುವರೆಗೂ ಅದು ದಕ್ಕಿಲ್ಲ. ಈ ನಿಟ್ಟಿನಲ್ಲಿ ರಾಜ್ಯಸಭೆಗೆ ಅವಕಾಶ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗುತ್ತಿದೆ. ಆದರೆ ಅವರಿಗೆ ನೀಡುವ ಸಾಧ್ಯತೆ ತೀರ ಕಡಿಮೆ ಎಂಬ ಮಾಹಿತಿ ಇದೆ. ರಾಜ್ಯಸಭೆಗೆ ರಾಜ್ಯದಿಂದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾಗಲು 45 ಮತಗಳ ಅಗತ್ಯವಿದೆ. ಕಾಂಗ್ರೆಸ್ ಬಳಿಕ 68 ಮತಗಳಿದ್ದು ಈ ನಿಟ್ಟಿನಲ್ಲಿ ಜೆಡಿಎಸ್‌ನಿಂದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಸ್ಪರ್ಧೆ ನಡೆಸಿದರೆ ಬೆಂಬಲ ಸೂಚಿಸುವ ಸಾಧ್ಯತೆ ಇದೆ.


from India & World News in Kannada | VK Polls https://ift.tt/3cv9eO5

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...