ಜಿಲ್ಲಾ ಪ್ರವಾಸದ ವೇಳೆ ಸ್ಥಳೀಯ ಶಾಸಕರಿಗೆ ಮಾಹಿತಿ ನೀಡುವುದು ಕಡ್ಡಾಯ, ಸಚಿವರಿಗೆ ಬಿಎಸ್‌ವೈ ಸೂಚನೆ

ಬೆಂಗಳೂರು: ಸಚಿವರುಗಳು ತಮ್ಮ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಶಾಸಕರಿಗೆ ಹಾಗೂ ಪಕ್ಷದ ಜಿಲ್ಲಾಧ್ಯಕ್ಷರುಗಳಿಗೆ ಮಾಹಿತಿಯನ್ನು ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಈ ಕುರಿತಾಗಿ ಅಧಿಕೃತ ಸೂಚನಾ ಪತ್ರವನ್ನು ಹೊರಡಿಸಲಾಗಿದ್ದು ಇದನ್ನು ಎಲ್ಲಾ ಸಚಿವರುಗಳು ಪಾಲನೆ ಮಾಡುವಂತೆ ತಿಳಿಸಲಾಗಿದೆ. ಸಚಿವರುಗಳು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಹಾಗೂ ಕಚೇರಿ ಕೆಲಸಗಳಿಗಾಗಿ ಜಿಲ್ಲಾ ಪ್ರವಾಸ ಕೈಗೊಳ್ಳುವ ಸಂದರ್ಭದಲ್ಲಿ ಆಯಾ ಜಿಲ್ಲೆಗಳ ವ್ಯಾಪ್ತಿಗೆ ಬರುವ ವಿಧಾನ ಸಭೆ ಹಾಗೂ ಪರಿಷತ್ ಸದಸ್ಯರಿಗೆ ಮಾಹಿತಿ ನೀಡಬೇಕು. ಅಲ್ಲದೆ ಪಕ್ಷದ ಜಿಲ್ಲಾಧ್ಯಕ್ಷರಿಗೂ ಮಾಹಿತಿಯನ್ನು ನೀಡಬೇಕು ಎಂದು ತಿಳಿಸಲಾಗಿದೆ. ಜಿಲ್ಲಾಧ್ಯಕ್ಷರ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಸ್ಥಳೀಯ ಶಾಸಕರುಗಳಿಗೆ ಮಾಹಿತಿ ನೀಡುತ್ತಿಲ್ಲ. ಇದರಿಂದ ಜನರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತಿಲ್ಲ ಎಂಬ ದೂರಿನ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್‌.ವೈ ಈ ಆದೇಶವನ್ನು ಹೊರಡಿಸಿದ್ದಾರೆ. ಈ ನಿಟ್ಟಿನಲ್ಲಿ ಸಚಿವರು ಕಡ್ಡಾಯವಾಗಿ ಈ ಸೂಚನೆಯನ್ನು ಪಾಲನೆ ಮಾಡುವಂತೆ ತಿಳಿಸಲಾಗಿದೆ. ಪ್ರವಾಸದ ಸಂದರ್ಭದಲ್ಲಿ ಎಲ್ಲಾ ಗಮನಕ್ಕೆ ತಂದು ಅಲ್ಲಿಯ ಜನರ ಸಮಸ್ಯೆಗಳು ಹಾಗೂ ಕುಂದುಕೊರತೆಗಳನ್ನು ಬಗೆಹರಿಸುವಂತೆ ಸೂಚನೆ ನೀಡಲಾಗಿದೆ.


from India & World News in Kannada | VK Polls https://ift.tt/3hHXDyZ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...