ತಜ್ಞರ ಸಲಹೆ ಆಧರಿಸಿ ರಾಜ್ಯದಲ್ಲಿ ಲಾಕ್‌ಡೌನ್‌ ನಿರ್ಧಾರ: ಸಚಿವ ಶ್ರೀರಾಮುಲು ಸ್ಪಷ್ಟನೆ

ಬೆಂಗಳೂರು: ಲಾಕ್‌ಡೌನ್ ಮಾಡಬೇಕೋ? ಬೇಡವೋ? ಎಂಬುದನ್ನು ತೀರ್ಮಾನಿಸಲು ತಜ್ಞರ ಸಮಿತಿ ಇದೆ. ಅವರ ಸಲಹೆ ಸೂಚನೆಯಂತೆ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಹೇಳಿದ್ದಾರೆ. ವಿಧಾನಸೌಧದಲ್ಲಿ ಬುಧವಾರ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಪರೀಕ್ಷೆ ಹೆಚ್ಚಾಗಬೇಕು ಎನ್ನುವ ಅಭಿಪ್ರಾಯ ಬಂದಿದೆ. ಕಾರ್ಮಿಕರು, ವ್ಯಾಪಾರಿಗಳು ಸೇರಿ 15 ವರ್ಗಗಳನ್ನು ಮಾಡಿ ಕೊರೊನಾ ಪರೀಕ್ಷೆ ಮಾಡಬೇಕಿದೆ. ಇದರಿಂದ ಸೋಂಕು ಸಮುದಾಯಕ್ಕೆ ಹರಡಿದಿಯೋ? ಇಲ್ಲವೋ? ಎಂಬುದು ಗೊತ್ತಾಗುತ್ತದೆ ಎಂದು ಹೇಳಿದರು. ಸೋಮವಾರ ಕೊರೊನಾ ಟಾಸ್ಕ್‌ಪೋರ್ಸ್ ಸಭೆ ಇದೆ. ಇದರ ಬಗ್ಗೆ ಚರ್ಚೆ ಮಾಡಿ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇವೆ. ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದ್ದು, ಸುಮಾರು 8,48,203 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್‌ ಕಡ್ಡಾಯವಾಗಿ ಧರಿಸಿ ಎಂದು ಹೇಳಿದರು. ಮಕ್ಕಳು, ಪೋಷಕರು ಭಯಪಡಬೇಕಿಲ್ಲ. ನಾನು ಮತ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಈಗಾಗಲೇ ಸಾಕಷ್ಟು ಸಭೆ ನಡೆಸಿದ್ದೇವೆ. ಮಕ್ಕಳ ಸುರಕ್ಷತೆಗೆ ಗಮನ ಕೊಟ್ಟಿದ್ದೇವೆ. ಕಂಟೈನ್ಮೆಂಟ್‌ ಝೋನ್‌ನಿಂದ ಬರುವ ವಿದ್ಯಾರ್ಥಿಗಳ ಮೇಲೆ ಹೆಚ್ಚು ಜಾಗ್ರತೆ ವಹಿಸುತ್ತೇವೆ ಎಂದು ಹೇಳಿದರು. ಅನ್‌ಲಾಕ್‌ ನಂತರ ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಬೆಂಗಳೂರಿನಲ್ಲಿ ಕೇವಲ 5 ದಿನದಲ್ಲಿ 650ಕ್ಕೂ ಹೆಚ್ಚು ಕೇಸ್‌ ದಾಖಲಾಗಿವೆ. ಆದ್ದರಿಂದ ಚರ್ಚೆ ರಾಜ್ಯದಲ್ಲಿ ವ್ಯಾಪಕವಾಗಿ ಕೇಳಿಬರುತ್ತಿದೆ. ಆದರೆ, ಸರಕಾರ ಬೆಂಗಳೂರಿನಲ್ಲಿ ಹೆಚ್ಚು ಕೊರೊನಾ ಪ್ರಕರಣಗಳಿರುವ ಪ್ರದೇಶದಲ್ಲಿ ಸೀಲ್‌ಡೌನ್‌ ಮಾಡುವ ನಿರ್ಧಾರ ಕೈಗೊಂಡಿದೆ.


from India & World News in Kannada | VK Polls https://ift.tt/2ZiwL0f

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...