ಚಿಕ್ಕಬಳ್ಳಾಪುರ: ಅಪರಿಚಿತ ಮಹಿಳೆಯೊಬ್ಬರ ಶವ ಪತ್ತೆಯಾಗಿ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ಗೌರಿ ಬಿದನೂರು ಪೊಲೀಸ್ ಠಾಣಾ ವ್ಯಾಪ್ತಿಯ ಹುಲಿಕುಂಟೆ ಗ್ರಾಮದ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು, ಸ್ಥಳೀಯರು ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯಾರೋ ದುಷ್ಕರ್ಮಿಗಳು ಮಹಿಳೆಯನ್ನು ಕೊಲೆ ಮಾಡಿ ಆಕೆಯ ಸೊಂಟಕ್ಕೆ ಇಪ್ಪತ್ತು ಕೆಜಿ ತೂಕದ ಕಲ್ಲನ್ನು ಕಟ್ಟಿ ಕುಂಟೆಯಲ್ಲಿ ಎಸೆದು ಹೋಗಿದ್ದಾರೆ. ನಿನ್ನೆ ಸುರಿದ ಭಾರೀ ಮಳೆಗೆ ರಭಸವಾಗಿ ಹರಿದು ಬಂದ ನೀರಿನ ಹೊಡೆತಕ್ಕೆ ಶವ ತೇಲಿಕೊಂಡು ಬಂದಿದ್ದು, ಇಂದು ಮುಂಜಾನೆ ಸ್ಥಳೀಯರು ಗಮನಿಸಿ ಆತಂಕಕ್ಕೆ ಒಳಗಾಗಿದ್ದಾರೆ. ಇನ್ನು ಈ ಮಾಹಿತಿ ಸಿಗುತ್ತಿದ್ದಂತೆ ಗ್ರಾಮಾಂತರ ಠಾಣೆಯ ಸ್ಥಳಕ್ಕೆ ಬಂದು ಶವವನ್ನು ಮೇಲಕ್ಕೆ ತೆಗೆದಿದ್ದಾರೆ. ಘಟನೆ ಸಂಬಂಧ ಗೌರಿಬಿದನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯ ಗುರುತು ಹಚ್ಚಲು ವಿಶೇಷ ತಂಡ ರಚಿಸಲಾಗಿದೆ. ಜೊತೆಗೆ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
from India & World News in Kannada | VK Polls https://ift.tt/3i7iCv9