ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು! ಸಿದ್ದರಾಮಯ್ಯ

ಬೆಂಗಳೂರು: ಭಾರತ- ಚೀನಾ ಗಡಿಯಲ್ಲಿ ನಡೆದ ಸಂಘರ್ಷದಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾಗಿರುವ ಹಿನ್ನೆಲೆಯಲ್ಲಿ ಗಡಿ ಸಂಘರ್ಷದ ಕುರಿತಾಗಿ ದೇಶದ ಜನರಿಗೆ ಸರ್ಕಾರ ಅಧಿಕೃತ ಮಾಹಿತಿಗಳನ್ನು ನೀಡಬೇಕು ಎಂದು ವಿರೋಧ ಪಕ್ಷದ ನಾಯಕ ಆಗ್ರಹಿಸಿದ್ದಾರೆ. ಟ್ವಿಟ್ಟರ್‌ನಲ್ಲಿ ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಚೀನಾ ದೇಶ ಗಡಿತಂಟೆ ಶುರುಹಚ್ಚಿ ಏಳು ವಾರಗಳಾಗುತ್ತಾ ಬಂತು. ಅಲ್ಲಿನ ಬೆಳವಣಿಗೆಗಳ ನಿಜಸಂಗತಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಲ್ಲಿಯವರೆಗೆ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಆಳುವವರ ಮೌನ ಜನದ್ರೋಹ ಮಾತ್ರವಲ್ಲ, ದೇಶದ್ರೋಹವೂ ಹೌದು ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶತ್ರು ದೇಶದ ವಿರುದ್ಧ ಹೋರಾಡುವುದು ಸರ್ಕಾರ ಅಲ್ಲ, ದೇಶ. ಸರ್ಕಾರ ದೇಶಕ್ಕೆ, ದೇಶದ ಜನತೆಗೆ ಉತ್ತರದಾಯಿ. ದೇಶದ ಪ್ರತಿಯೊಬ್ಬ ಪ್ರಜೆಯೂ ಕೇಂದ್ರ ಸರ್ಕಾರವನ್ನು ನಂಬಿದೆ, ಜನರನ್ನು ವಿಶ್ವಾಸಕ್ಕೆ‌ ತೆಗೆದುಕೊಂಡು ನಂಬಿಕೆಯನ್ನು ಉಳಿಸಿಕೊಳ್ಳುವ ಹೊಣೆಯೂ ಕೇಂದ್ರ ಸರ್ಕಾರದ್ದು ಎಂದಿದ್ದಾರೆ. ದೇಶಕ್ಕಾಗಿ ಬೆವರು-ರಕ್ತ ಹರಿಸಿದ ನಾಯಕರ ಪಕ್ಷವಾದ ಕಾಂಗ್ರೆಸ್ ಪಕ್ಷ ಭಾರತದ ಏಕತೆ, ಅಖಂಡತೆ ಮತ್ತು ಸಾರ್ವಭೌಮತೆಗೆ ಸದಾ ಬದ್ಧವಾಗಿದೆ.ವೀರ ಸೈನಿಕರ ಬಲಿದಾನ ವ್ಯರ್ಥವಾಗಬಾರದು. ಹುತಾತ್ಮರ ಕುಟುಂಬಕ್ಕೆ ಗೌರವದ ಶ್ರದ್ಧಾಂಜಲಿ ಸಲ್ಲಿಸೋಣ. ಚೀನಾದ ದುಷ್ಕೃತ್ಯವನ್ನು ಒಕ್ಕೊರಲಿನಿಂದ ಖಂಡಿಸೋಣ ಎಂದು ಅವರು ಟ್ವೀಟ್ ಮಾಡಿದ್ದಾರೆ.


from India & World News in Kannada | VK Polls https://ift.tt/2YGjb6h

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...