ನವದೆಹಲಿ: ಗಡಿಯಲ್ಲಿ ಚೀನಾದ ಕ್ಯಾತೆಯ ಪರಿಣಾಮವಾಗಿ ಭಾರತ ಯುದ್ಧದ ತಯಾರಿನಲ್ಲಿ ನಿರತವಾಗಿದೆ ಎಂಬ ಸುದ್ದಿಗಳಿಗೇನೂ ಭರವಿಲ್ಲ. ಈ ಮಧ್ಯೆ ಕೇಂದ್ರ ಅಮಿತ್ ಶಾ ಮಾಡಿದ್ದಾರೆ ಎನ್ನಲಾದ ಟ್ವೀಟ್ವೊಂದು ಭಾರೀ ಸುದ್ದಿ ಮಾಡುತ್ತಿದ್ದು, ಇದೊಂದು ಸುಳ್ಳು ಸುದ್ದಿ ಎಂಬುದು ಸಾಬೀತಾಗಿದೆ. ಟ್ವೀಟ್ನಲ್ಲಿ ಏನಿತ್ತು?: ಕೇಂದ್ರ ಗೃಹ ಸಚಿವ ಅಧಿಕೃತ ಟ್ವಿಟ್ಟರ್ ಅಕೌಂಟ್ನಂತೆಯೇ ಕಾಣುವ ಟ್ವೀಟ್ವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರಲ್ಲಿ ಲಡಾಖ್ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಇಂಟರ್ನೆಟ್ ಸ್ಥಗಿತಗೊಳ್ಳಲಿದೆ ಎಂದು ಬರೆಯಲಾಗಿತ್ತು. ಖುದ್ದು ಗೃಹ ಸಚಿವರೇ ಈ ರೀತಿ ಮಾಹಿತಿ ನೀಡಿದ್ದಾರೆ ಎಂದು ಎರಡೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಗಾಳಿ ಸುದ್ದಿ ಹರಿದಾಡುತ್ತಿತ್ತು. ಗೃಹ ಸಚಿವಾಲಯದ ಸ್ಪಷ್ಟನೆ ಏನು?: ಇನ್ನು ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಸಚಿವಾಲಯ, ಇದೊಂದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಗೃಹ ಖಾತೆ ವಕ್ತಾರ, ಅಮಿತ್ ಶಾ ಅವರು ಇಂತಹ ಯಾವುದೇ ಟ್ವೀಟ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಪ್ರಸ್ತುತ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ನಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಿಲ್ಲ ಎಂದೂ ಕೇಂದ್ರ ಗೃಹ ಸಚಿವಾಲಯ ಸ್ಪಷ್ಟಪಡಿಸಿದೆ. ಅಮಿತ್ ಶಾ ಇಂತಹ ಯಾವುದೇ ಟ್ವೀಟ್ ಮಾಡಿಲ್ಲ ಎಂದು ಸ್ಪಷ್ಟಪಡಿಸಲಾಗಿದ್ದು, ಜನ ವದಂತಿಗಳಿಗೆ ಕಿವಿಗೊಡಬಾರದು ಎಂದು ಕೇಂದ್ರ ಗೃಹ ಸಚಿವಾಲಯ ಮನವಿ ಮಾಡಿದೆ. ಗಡಿಯಂತಹ ಸೂಕ್ಷ್ಮ ವಿಷಯಗಳಲ್ಲೂ ಕೆಲವರು ಸುಳ್ಳು ಸುದ್ದಿಗಳನ್ನು ಹರಡುವಲ್ಲಿ ನಿರತವಾಗಿರುವುದ ನಿಜಕ್ಕೂ ದುರ್ದೈವದ ಸಂಗತಿಯಾಗಿದೆ.
from India & World News in Kannada | VK Polls https://ift.tt/2CXc5mZ