ಕೊರೊನಾ ಅಟ್ಟಹಾಸ: ಮತ್ತೆ ಲಾಕ್‌ಡೌನ್ ಪ್ರಶ್ನೆಯೇ ಇಲ್ಲ ಎಂದ ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ಆದರೆ ಮಾಡುವ ಯಾವುದೇ ಉದ್ದೇಶ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆಯ ದೃಷ್ಟಿಯಿಂದ ಲಾಕ್‌ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಎಲ್ಲಾ ಪಕ್ಷಗಳ ಶಾಸಕರ ಸಭೆಯನ್ನು ಅವರು ಕರೆಯಲಾಗಿದೆ. ವಿಧಾನಸೌಧದಲ್ಲಿ ಸಚಿವರು ಹಾಗೂ ಶಾಸಕರ ಸಭೆ ಮಧ್ಯಾಹ್ಮ 12 ಗಂಟೆಗೆ ನಡೆಯಲಿದೆ. ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಕೊರೊನಾ ಸ್ಥಿತಿಗತಿ ಹಾಗೂ ನಿಯಂತ್ರಣಾ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ಶಾಸಕರ ಅಭಿಪ್ರಾಯವನ್ನು ಸಿಎಂ ಬಿಎಸ್‌ವೈ ಪಡೆಯಲಿದ್ದಾರೆ. ಈ ವಿಚಾರವಾಗಿ ಮಾತನಾಡಿದ ಅವರು, ಕೊರೊನಾ ನಿಯಂತ್ರಣದ ಕುರಿತಾಗಿ ಎಲ್ಲಾ ಶಾಸಕರು ಹಾಗೂ ಸಚಿವರ ಸಭೆಯಲ್ಲಿ ಸವಿಸ್ತಾರ ಚರ್ಚೆ ನಡೆಸಲಾಗುವುದು ಎಂದರು. ರಾಜ್ಯದಲ್ಲಿ ಕೋವಿಡ್‌ ತಡೆಯುವಲ್ಲಿ ಯಶಸ್ವಿಯಾಗಿದ್ದೇವೆ. ಆದರೆ ಕಳೆದ ಕೆಲವು ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಇದನ್ನು ತಡೆಯಲು ಎಲ್ಲರ ಸಹಕಾರ ಅಗತ್ಯ ಎಂದರು. ಶಾಸಕರು ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಗಮನ ಕೊಟ್ರೆ ಕೋವಿಡ್‌ ತಡೆಯಲು ಸಾಧ್ಯ. ಆದರೆ ಇದರ ಹೊರತಾಗಿ ಲಾಕ್‌ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದಿಲ್ಲ. ಈ ನಿಟ್ಟಿನಲ್ಲಿ ಸಭೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.


from India & World News in Kannada | VK Polls https://ift.tt/3i4ldWQ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...