ಕೊರೊನಾ ಅಟ್ಟಹಾಸ: ರಾಜ್ಯದಲ್ಲಿ ಮತ್ತೆ ನಾಲ್ವರು ಬಲಿ?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ಭಾನುವಾರ ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೆ ನಾಲ್ವರು ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಮಂಗಳೂರಿನಲ್ಲಿ ಇಬ್ಬರು ಮೃತಪಟ್ಟರೆ, ಹಾಸನದಲ್ಲಿ ಮಹಿಳೆಯೊಬ್ಬರು ಹಾಗೂ ತುಮಕೂರಿನಲ್ಲಿ ವ್ಯಕ್ತಿಯೊಬ್ಬರು ಸೋಂಕಿಗೆ ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಂಗಳೂರಿನ ಬಂಟ್ವಾಳದ ನಿವಾಸಿಯಾಗಿರುವ 57 ವರ್ಷದ ಮಹಿಳೆಗೆ ಕೊರೊನಾ ಪಾಸಿಟಿವ್ ಆಗಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ಅವರು ಭಾನುವಾರ ಮೃತಪಟ್ಟಿದ್ದಾರೆ. ಅದೇ ರೀತಿ ಸುರತ್ಕಲ್ ನಿವಾಸಿಯಾಗಿರುವ 31 ವರ್ಷದ ಯುವಕ ಕೂಡಾ ಬಲಿಯಾಗಿದ್ದಾನೆ ಎಂಬ ಮಾಹಿತಿ ಇದೆ. ಹಾಸನ ಜಿಲ್ಲೆಯಲ್ಲೂ ಕೊರೊನಾಗೆ ಭಾನುವಾರ ಓರ್ವ ವೃದ್ದೆ ಬಲಿಯಾಗಿದ್ದಾರೆ. ಮುಂಬಯಿಯಿಂದ ಕುಟುಂಬದೊಂದಿಗೆ 18 ರಂದು ಆಗಮಿಸಿ ಕೋವಿಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 60 ವರ್ಷದ ವೃದ್ದೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಾವುನ್ನಪ್ಪಿದ್ದಾರೆ. ಮುಂಜಾಗರೂಕತಾ ಕ್ರಮವಾಗಿ ಮಗ, ಸೊಸೆ,ಮೊಮ್ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ತುಮಕೂರಿನ 40 ವರ್ಷದ ವ್ಯಕ್ತಿಯ ಸಾವಿಗೂ ಕೊರೊನಾ ಸೋಂಕು ಕಾರಣ ಎಂದು ತಿಳಿದುಬಂದಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಭಾನುವಾರ ಮೃತಪಟ್ಟಿದ್ದಾರೆ. ಈ ನಾಲ್ಕು ಸಾವಿನ ಕುರಿತಾಗಿ ಆರೋಗ್ಯ ಇಲಾಖೆಯಿಂದ ಅಧಿಕೃತ ಹೇಳಿಕೆಗಳು ಇನ್ನಷ್ಟೇ ಬರಬೇಕಾಗಿದೆ.


from India & World News in Kannada | VK Polls https://ift.tt/2NASJGb

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...