ಪುಲ್ವಾಮಾ ಎನ್‌ಕೌಂಟರ್; ಮೂವರು ಉಗ್ರರನ್ನು ಹತ್ಯೆಗೈದ ಭದ್ರತಾ ಪಡೆ

ಪುಲ್ವಾಮಾ: ಭಾರತೀಯ ಭದ್ರತಾ ಪಡೆ ನಡೆಸಿರುವ ಪುಲ್ವಾಮಾ ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಹತ್ಯೆಗೈಯುವಲ್ಲಿ ಯಶಸ್ವಿಯಾಗಿದೆ. ಬುಧವಾರ ಬೆಳಗ್ಗೆ ಕಂಗನ್ ಪ್ರದೇಶದಲ್ಲಿ ಭದ್ರತಾ ಪಡೆ ಕಾರ್ಯಾಚರಣೆಯನ್ನು ನಡೆಸಿತ್ತು. ಈ ಸಂದರ್ಭದಲ್ಲಿ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದೆ. ಪೊಲೀಸರು ಈ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದು ಗುಂಡುಗಳನ್ನು ವಶಪಡಿಸಲಾಗಿದೆ. ವೇಳೆಯಲ್ಲಿ ಪ್ರದೇಶದಲ್ಲಿ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ಕಡಿತಗೊಳಿಸಲಾಗಿತ್ತು. ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ. ಮಂಗಳವಾರ ಟ್ರಾಲ್ ಪ್ರದೇಶದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ಜೈಷೆ ಮೊಹಮ್ಮದ್ ಉಗ್ರನನ್ನು ಹತ್ಯೆಗೈಯಲಾಗಿತ್ತು. ಈ ವೇಳೆಯಲ್ಲೂ ಶಸ್ತ್ರಾಸ್ತ್ರ ಹಾಗೂ ಸ್ಫೋಟಕಗಳನ್ನು ವಶಪಡಿಸಲಾಗಿತ್ತು. ಈ ಮುನ್ನ ಗಡಿ ನುಸುಳಲು ಬಂದ 13 ಉಗ್ರರನ್ನು ಭಾರತೀಯ ಭದ್ರತಾ ಪಡೆಯು ಹತ್ಯೆಗೈದಿತ್ತು. ಕಲಾಲ್ ಗ್ರಾಮ ಸಮೀಪ 10 ಗಡಿ ನುಸುಳಲು ಯತ್ನಿಸಿದ್ದರು. ಮಗದೊಂದು ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರನ್ನು ಮಟ್ಟ ಹಾಕುವಲ್ಲಿ ಭದ್ರತಾ ಪಡೆ ಯಶಸ್ವಿಯಾಗಿತ್ತು.


from India & World News in Kannada | VK Polls https://ift.tt/3ctwTOS

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...