ವಿಶ್ವನಾಥ್ ಪ್ರಕಾರ ಬಿಜೆಪಿಗೂ ನಾನೇ ಹೈ ಕಮಾಂಡಾ? ಹಳ್ಳಿಹಕ್ಕಿಗೆ ಸಿದ್ದು ಗುದ್ದು!

ಬೆಂಗಳೂರು: ಹೆಚ್‌.ವಿಶ್ವನಾಥ್ ಪ್ರಕಾರ ಬಿಜೆಪಿಗೆ ನಾನೇ ಹೈಕಮಾಂಡಾ? ಹೀಗಂತ ಪ್ರಶ್ನಿಸಿದವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನಗೆ ಟಿಕೆಟ್ ತಪ್ಪಲು ಅವರು ಕಾರಣ ಎಂಬ ವಿಶ್ವನಾಥ್ ಹೇಳಿಕೆಗೆ ತಿರುಗೇಟು ನೀಡಿದ ಪರಿ ಇದು. ಬಿಜೆಪಿಯಲ್ಲಿ ಮೇಲ್ಮನೆ ಟಿಕೆಟ್ ಆಕಾಂಕ್ಷಿಯಾಗಿದ್ದ ಹೆಚ್‌. ವಿಶ್ವನಾಥ್ ಅವರಿಗೆ ಟಿಕೆಟ್‌ ಸಿಕ್ಕಿಲ್ಲ. ಇದರಿಂದ ಅವರು ಅಸಮಾಧಾನಗೊಂಡಿದ್ದಾರೆ. ಟಿಕೆಟ್‌ ಕೈತಪ್ಪಲು ಸಿದ್ದರಾಮಯ್ಯ ಕಾರಣ ಎಂಬ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆಗೆ ಸಿದ್ದರಾಮಯ್ಯ ಈ ರೀತಿಯಾಗಿ ಟಾಂಗ್‌ ಕೊಟ್ರು. ಇನ್ನು ಮೇಲ್ಮನೆ ಅಭ್ಯರ್ಥಿಗಳಿಗೆ ಕೆಪಿಸಿಸಿ ಕಚೇರಿಯಲ್ಲಿ ಬಿ-ಫಾರಂ ನೀಡಿದ ಬಳಿಕ ಮಾತನಾಡಿದ ಅವರು, ವಿಧಾನ ಪರಿಷತ್ ಅಭ್ಯರ್ಥಿ ಸ್ಥಾನಕ್ಕಾಗಿ ಸುಮಾರು 270 ಅರ್ಜಿಗಳು ಬಂದಿದ್ದವು. ಎಲ್ಲಾ ಅರ್ಜಿಗಳನ್ನು ಪರಿಶೀಲನೆ ನಡೆಸಿ ಹೈ ಕಮಾಂಡ್‌ಗೆ ಕಳುಹಿಸಿದ್ದೆವು. ಅಂತಿಮವಾಗಿ ಹೈ ಕಮಾಂಡ್ ಇಬ್ಬರನ್ನು ಆಯ್ಕೆಮಾಡಿದೆ ಎಂದರು. ಹರಿಪ್ರಸಾದ್‌ ಆಯ್ಕೆಯ ಬಗ್ಗೆ ಭಿನ್ನಾಭಿಪ್ರಾಯದ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು ನಝೀರ್ ಅಹಮ್ಮದ್ ಹಾಗೂ ಬಿ.ಕೆ ಹರಿಪ್ರಸಾದ್ ಇಬ್ಬರು ಒಮ್ಮತದ ಅಭ್ಯರ್ಥಿ. ಪರಿಷತ್ ಹಿರಿಯರ ಮನೆಯಾಗಿರುವುದರಿಂದ ಈ ಆಯ್ಕೆ ಸಮರ್ಥನೀಯ ಎಂದರು. ಇನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು. ಈ ಕುರಿತಾಗಿ ಸಿಎಲ್‌ಪಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದರು.


from India & World News in Kannada | VK Polls https://ift.tt/2YOL4t5

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...