ಕೊರೊನಾ ಎಫೆಕ್ಟ್‌: ವಿಧಾನಸೌಧ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರ ಸ್ವರೂಪದಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೂ ಸಾರ್ವಜನಿಕ ಪ್ರದೇಶಕ್ಕೆ ನಿರ್ಬಂಧ ಹೇರಲಾಗಿದೆ. ಸಚಿವರು, ಅಧಿಕಾರಿಗಳು ಹಾಗೂ ಶಾಸಕರನ್ನು ಭೇಟಿ ಮಾಡಲು ವಿಧಾನಸೌಧಕ್ಕೆ ಬರುವ ಸಾರ್ವಜನಿಕರಿಗೆ ಮಧ್ಯಾಹ್ಮ 3.30 ನಂತರವಷ್ಟೇ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಬೆಂಗಳೂರು ನಗರದಲ್ಲಿ ಕಳೆದ 16 ದಿನಗಳಿಂದ ಸೋಂಕು ತೀವ್ರವಾಗಿ ಹರಡುತ್ತಿದೆ. ರಾಜ್ಯದಲ್ಲಿ ಸೋಂಕು ಪ್ರಕರಣಗಳ ಸಂಖ್ಯೆ 10,000 ಗಡಿ ದಾಟಿದೆ. ತೀವ್ರವಾಗಿ ಹರಡುತ್ತಿರುವ ಸೋಂಕನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದೆ. ಅದರಲ್ಲೂ ಆಡಳಿತ ಶಕ್ತಿಕೇಂದ್ರದಲ್ಲಿ ಕೊರೊನಾ ಸೋಂಕು ಹರಡದಂತೆ ಸಾಕಷ್ಟು ಎಚ್ಚರಿಕೆಗಳನ್ನು ಕೈಗೊಳ್ಳಲಾಗಿದೆ. ಹಾಗೂ ವಿಕಾಸಸೌಧಕ್ಕೆ ಬರುವ ಪ್ರತಿಯೊಬ್ಬರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಜೊತೆಗೆ ಸಿಬ್ಬಂದಿಗಳಿಗೂ ತಪಾಸಣೆ ನಡೆಸಲಾಗಿದೆ. ಈ ನಿಟ್ಟಿನಲ್ಲಿ ವಿಧಾನಸೌಧಕ್ಕೆ ಸಾರ್ವಜನಿಕರಿಗೆ ಅವಕಾಶ ನಿರಾಕರಿಸಲಾಗಿದೆ. ಮಧ್ಯಾಹ್ಮ 3.30 ಯ ನಂತರವಷ್ಟೇ ಅವಕಾಶ ನೀಡಲು ಸೂಚನೆ ನೀಡಲಾಗಿದೆ. ಬರುವ ಸಾರ್ವಜನಿಕರು ಕಡ್ಡಾಯ ಮಾಸ್ಕ್ ಧರಿಸುವಂತೆಯೂ ಸೂಚನೆ ನೀಡಲಾಗಿದೆ.


from India & World News in Kannada | VK Polls https://ift.tt/3fXIEzm

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...