ಚೀನಾ-ಭಾರತ ಗಡಿ ಸಂಘರ್ಷ, ಸರ್ವ ಪಕ್ಷಗಳ ಸಭೆ ಕರೆದ ಪ್ರಧಾನಿ ಮೋದಿ

ಹೊಸದಿಲ್ಲಿ: ಕೇಂದ್ರಾಡಳಿತ ಪ್ರದೇಶದ ಗಾಲ್ವಾನ್‌ ಕಣಿವೆಯಲ್ಲಿ ಸೋಮವಾರ ರಾತ್ರಿ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಪ್ರಧಾನಿ ಶುಕ್ರವಾರ (ಜೂನ್‌ 19) ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ. 'ಭಾರತ-ಚೀನಾ ಗಡಿ ಪ್ರದೇಶದಲ್ಲಿನ ಪರಿಸ್ಥಿತಿ ಬಗ್ಗೆ ಚರ್ಚಿಸಲು ಜೂನ್‌ 19ರ ಸಂಜೆ 5 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಕರೆದಿದ್ದಾರೆ' ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಟ್ಟೀಟ್‌ ಮಾಡಿದೆ. ವಿವಿಧ ಪಕ್ಷಗಳ ಅಧ್ಯಕ್ಷರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆನ್‌ಲೈನ್‌ ಮೂಲಕ (ವರ್ಚುವಲ್‌) ಈ ಸಭೆ ನಡೆಯಲಿದೆ ಎಂದು ಕಾರ್ಯಾಲಯ ಮಾಹಿತಿ ನೀಡಿದೆ.

ಸೋಮವಾರ ರಾತ್ರಿ ಗಾಲ್ವಾನ್‌ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಮಾರಣಾಂತಿಕ ಘರ್ಷಣೆ ನಡೆದಿತ್ತು. ಇದರಲ್ಲಿ ಭಾರತದ 20 ಸೈನಿಕರು ಹುತಾತ್ಮರಾಗಿದ್ದಾರೆ. ಇನ್ನು ಚೀನಾದ 43 ಸೈನಿಕರಿಗೂ ಗಾಯವಾಗಿದ್ದು, ಹಲವರು ಸಾವಿಗೀಡಾಗಿರುವ ಸಾಧ್ಯತೆ ಇದೆ. ಆದರೆ ಈ ಬಗ್ಗೆ ಚೀನಾ ಇಲ್ಲಿಯವರೆಗೆ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.


from India & World News in Kannada | VK Polls https://ift.tt/2UOx4Oz

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...