ತೆಲಂಗಾಣದ ಡಿಸಿಎಂಗೆ ಕೊರೊನಾ ಪಾಸಿಟಿವ್..! ರಾಜಕಾರಣಿಗಳಲ್ಲಿ ಹೆಚ್ಚಿದ ಆತಂಕ

ತೆಲಂಗಾಣ: ಕೊರೊನಾ ಮಹಾಮಾರಿ ಇಡೀ ಜಗತ್ತನ್ನೇ ತಲ್ಲಣಗೊಳಿಸುತ್ತಿರುವ ಬೆನ್ನಲ್ಲೇ ಇದೀಗ ತೆಲಂಗಾಣದ ಉಪಮುಖ್ಯಮಂತ್ರಿ ಮಹಮ್ಮದ್ ಆಲಿ ಅವರಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿದೆ. ತೆಲಂಗಾಣದ ಡಿಸಿಎಂ ಹಾಗೂ ಗೃಹಸಚಿವರಾಗಿರುವ ಮಹಮ್ಮದ್ ಆಲಿ ಅವರು ಜೂನ್ 26ರಂದು ಹರಿತಾ ಹರಾಂ ಅನ್ನುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇದೀಗ ಅವರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು ರಾಜ್ಯದ ಕಾರ್ಪೋರೇಟ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗೆ ಗೃಹ ಸಚಿವರಾದ ಮಹಮ್ಮದ್ ಆಲಿ ಅವರ ಭದ್ರತಾ ಪಡೆ ಸಿಬ್ಬಂದಿಯೊಬ್ಬರಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಇದೀಗ ಸ್ವತಃ ರಾಜ್ಯದ ಉಪಮುಖ್ಯಮಂತ್ರಿಯಲ್ಲೇ ಕೊರೊನಾ ಕಾಣಿಸಿಕೊಂಡಿರೋದು ತೆಲಂಗಾಣದ ರಾಜಕಾರಣಿಗಳನ್ನು ಮತ್ತಷ್ಟು ಆತಂಕಕ್ಕೆ ದೂಡುವಂತೆ ಮಾಡಿದೆ. ಸದ್ಯ ಡಿಸಿಎಂ ಜೊತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಟಿ ಪೊಲೀಸ್ ಆಯುಕ್ತ ಸೇರಿದಂತೆ ಹಲವು ಅಧಿಕಾರಿಗಳನ್ನು ಹೋಂ ಕ್ವಾರೆಂಟೈನ್‌ಗೆ ಕಳುಹಿಸಲಾಗಿದೆ. ತೆಲಂಗಾಣದಲ್ಲಿ ಕೂಡ ಕೊರೊನಾ ಪ್ರಕರಣಗಳು ದಿನೇ ದಿನೇ ಹೆಚ್ಚಳ ಕಂಡು ಬರುತ್ತಿದ್ದು, ಮುಖ್ಯಮಂತ್ರಿ ಕೆ.ಸಿ.ಆರ್. ಅವರ ನೇತೃತ್ವದ ಸರ್ಕಾರ ಕೊರೊನಾ ರೋಗವನ್ನು ನಿಯಂತ್ರಣಕ್ಕೆ ತರಲು ಇನ್ನಿಲ್ಲದ ಶ್ರಮ ಪಡುತ್ತಿದೆ. ಇದೀಗ ರಾಜ್ಯದ ಗೃಹ ಸಚಿವರಲ್ಲೇ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿರೋದು ಜನರಲ್ಲಿ ನಿಜಕ್ಕೂ ಅಚ್ಚರಿ ಮೂಡಿಸಿದೆ.


from India & World News in Kannada | VK Polls https://ift.tt/3ib4BwG

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...