ಮೇಲ್ಮನೆ ಅಭ್ಯರ್ಥಿ ಆಯ್ಕೆ ಗೊಂದಲ, ಗುರುವಾರ ಸಿಎಲ್‌ಪಿ ಸಭೆ ಕರೆದ ಸಿದ್ದರಾಮಯ್ಯ

ಬೆಂಗಳೂರು: ಮೇಲ್ಮನೆ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಚರ್ಚೆ ನಡೆಸುವ ನಿಟ್ಟಿನಲ್ಲಿ ಶಾಸಕಾಂಗ ಪಕ್ಷದ ಸಭೆಯನ್ನು ಗುರುವಾರ ಸಿಎಲ್‌ಪಿ ನಾಯಕ ಕರೆದಿದ್ದಾರೆ. ಗುರುವಾರ ಬೆಳಗ್ಗೆ 9 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಯಲಿದೆ. ವಿಧಾನಪರಿಷತ್‌ ಚುನಾವಣೆಗೆ ಎರಡು ಸ್ಥಾನಗಳ ಪೈಕಿ ಅಭ್ಯರ್ಥಿ ಆಯ್ಕೆಯನ್ನು ಕಾಂಗ್ರೆಸ್ ಇನ್ನು ಅಂತಿಮಗೊಳಿಸಿಲ್ಲ. ಹೀಗಿದ್ದರೂ ಎಂ.ಆರ್ ಸೀತಾರಾಮ್ ಹಾಗೂ ನಜೀರ್ ಅಹಮ್ಮದ್ ಹೆಸರು ಮುಂಚೂಣಿಯಲ್ಲಿದೆ. ಆದರೆ ಮತ್ತಷ್ಟು ಆಕಾಂಕ್ಷಿಗಳು ಲಾಬಿ ನಡೆಸುತ್ತಿರುವುದು ರಾಜ್ಯ ಮುಖಂಡರ ಪಾಲಿಗೆ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ ಗುರುವಾರ ಕಾಂಗ್ರೆಸ್ ಪಕ್ಷದಿಂದ ಇಬ್ಬರು ಉಮೇದುವಾರರು ನಾಮಪತ್ರವನ್ನು ಸಲ್ಲಿಸಲಿದ್ದಾರೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಮಹತ್ವ ಪಡೆದುಕೊಂಡಿದೆ. ಸಭೆಗೆ ಎಲ್ಲಾ ಶಾಸಕರು ಹಾಜರಾಗುವಂತೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಜೂನ್ 29 ರಂದು ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಆಯ್ಕೆಯಾಗುವ ಏಳು ಸ್ಥಾನಗಳಿಗಾಗಿ ಚುನಾವಣೆ ನಡೆಯಲಿದೆ. ಅಭ್ಯರ್ಥಿ ಆಯ್ಕೆ ವಿಚಾರವಾಗಿ ಬಿಜೆಪಿ ಹಾಗೂ ಜೆಡಿಎಸ್‌ನಲ್ಲೂ ಭಾರೀ ಪೈಪೋಟಿ ನಡೆಯುತ್ತಿದೆ.


from India & World News in Kannada | VK Polls https://ift.tt/2N5iv59

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...