ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ, ಪಾಲಿಸದಿದ್ದರೆ ಕ್ರಿಮಿನಲ್ ಕೇಸ್; ಭಾಸ್ಕರ್ ರಾವ್ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್‌, ಸಾಮಾಜಿಕ ಅಂತರ ಕಡ್ಡಾಯವಾಗಿ ಪಾಲನೆ ಮಾಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್‌ ರಾವ್‌ ಸೂಚನೆ ನೀಡಿದ್ದಾರೆ. ಈಗಾಗಲೇ ಪೊಲೀಸ್ ಅಧಿಕಾರಿಗಳು ಹಾಗೂ ಬಿಬಿಎಂಪಿ ಸಿಬ್ಬಂದಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸದೇ ಇರುವುವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. 200 ರೂಪಾಯಿ ದಂಢವನ್ನು ವಿಧಿಸಲಾಗುತ್ತಿದ್ದು ಇನ್ಮುಂದೆ ಕ್ರಿಮಿನಲ್ ಕೇಸ್ ದಾಖಲಿಸುವ ಎಚ್ಚರಿಕೆಯನ್ನು ಭಾಸ್ಕರ್ ರಾವ್ ನೀಡಿದ್ದಾರೆ. ಬೆಂಗಳೂರು ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿದೆ. ಶನಿವಾರ ಒಂದೇ ದಿನ 596 ಮಂದಿಗೆ ಸೋಂಕು ಕಾಣಿಸಿಕೊಂಡಿದೆ. ಇದರಿಂದಾಗಿ ನಗರದಲ್ಲಿ ಸೋಂಕಿತರ ಪ್ರಮಾಣ 2,531ಕ್ಕೆ ತಲುಪಿದೆ. ನಗರದಲ್ಲಿ ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಈಗಾಗಲೇ ಹಲವು ಪ್ರದೇಶಗಳನ್ನು ಸೀಲ್‌ಡೌನ್ ಮಾಡಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಬಿಗಿ ಕ್ರಮಗಳನ್ನು ಜರಗಿಸಲು ಸರ್ಕಾರ ಮುಂದಾಗಿದೆ.


from India & World News in Kannada | VK Polls https://ift.tt/2Zf3raS

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...