ಗಿಡಮರಗಳನ್ನು ನೆಟ್ಟು ಬೆಳೆಸಿದರೆ ದೇವಾಲಯವನ್ನೇ ಕಟ್ಟಿದಷ್ಟು ಪುಣ್ಯ! ಬಿಎಸ್‌ವೈ ಸಂದೇಶ

ಬೆಂಗಳೂರು: ಗಿಡಮರಗಳನ್ನು ನೆಟ್ಟು ಬೆಳೆಸಿದರೆ ಒಂದು ದೇವಾಲಯವನ್ನೇ ಕಟ್ಟಿದಷ್ಟು ಪುಣ್ಯ ಲಭಿಸಲಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ವಿಶ್ವ ಪರಿಸರ ದಿನವಾದ ಜೂನ್‌ 5 ರಂದು ಪರಿಸರದ ಕುರಿತಾಗಿ ಸಂದೇಶ ನೀಡಿದ ಅವರು ಜೀವ ವೈವಿಧ್ಯತೆ ಇದ್ದರಷ್ಟೆ ಪ್ರಕೃತಿಯ ಸಮತೋಲನ ಸಾಧ್ಯ ಎಂದಿದ್ದಾರೆ. ಜೀವ ವೈವಿಧ್ಯ ಈ ವರ್ಷದ ಘೋಷವಾಕ್ಯವಾಗಿರುವುದು ಅತ್ಯಂತ ಔಚಿತ್ಯಪೂರ್ಣವಾಗಿದೆ. ಜೀವ ವೈವಿಧ್ಯತೆ ಇದ್ದರಷ್ಟೆ ಪ್ರಕೃತಿಯ ಸಮತೋಲನ ಸಾಧ್ಯ. ಪ್ರಾಣಿ, ಪಕ್ಷಿಗಳು, ಗಿಡಮರಗಳು, ಸಸ್ಯ ಸಂಪತ್ತು, ಪರ್ವತಗಳು, ಜಲಚರಗಳೆಲ್ಲವೂ ನಮ್ಮ ಬದುಕಿನ ಭಾಗಗಳೇ. ಗಾಳಿ, ನೀರು, ಭೂಮಿ, ಆಕಾಶ, ಸ್ವಚ್ಛವಾಗಿದ್ದರೆ ಮಾತ್ರ ನಮ್ಮ ಜೀವನ ಆರೋಗ್ಯವಾಗಿರುತ್ತದೆ. ಮನುಷ್ಯ ತನ್ನ ಜೀವಿತಾವಧಿಯಲ್ಲಿ ಗಿಡಮರಗಳನ್ನು ನೆಟ್ಟು ಬೆಳಸಿದರೆ ಒಂದು ದೇವಾಲಯವನ್ನೇ ಕಟ್ಟಿದಷ್ಟು ಪುಣ್ಯ ಲಭಿಸುತ್ತದೆ. ಮುಂದಿನ ಪೀಳಿಗೆಗೆ ನಾವು ನೀಡಬಹುದಾದ ಬಹುದೊಡ್ಡ ಬಳುವಳಿಯೇ ಉತ್ತಮ ಪರಿಸರವಾಗಿದೆ ಎಂದರು. ಪ್ರಕೃತಿಯನ್ನು ಸಂರಕ್ಷಿಸುವ ಗುರುತರ ಜವಾಬ್ದಾರಿ ನಮ್ಮ ಮೇಲಿದೆ. ನಮ್ಮ ಆಧುನಿಕ ಜೀವನ ಶೈಲಿಯಿಂದ ಪರಿಸರದ ಅಪರೂಪದ ಪ್ರಾಣಿ-ಪಕ್ಷಿಗಳನ್ನು ನಾವಿಂದು ಕಳೆದುಕೊಂಡಿದ್ದೇವೆ. ಇದರಿಂದ ಪ್ರಕೃತಿಯ ಅಸಮತೋಲನ ಹೆಚ್ಚಾಗುತ್ತಿದೆ. ಪ್ರಕೃತಿಯು ಮನುಷ್ಯನ ಅಗತ್ಯತೆಗಳನ್ನು ಪೂರೈಸಬಲ್ಲದೇ ಹೊರತು ಮನುಷ್ಯನ ದುರಾಸೆಗಳನ್ನಲ್ಲ ಎಂದು ಮಹಾತ್ಮ ಗಾಂಧೀಜಿಯವರು ಹೇಳಿದ ಮಾತು ಸದಾ ಕಾಲಕ್ಕೂ ಪ್ರಸ್ತುತವಾದುದು.ನಿಸರ್ಗ ಹಾಗೂ ಪರಿಸರ ನಮ್ಮ ಬದುಕಿನ ಭಾಗ. ಪ್ಲಾಸ್ಟಿಕ್ ಬಳಕೆಯನ್ನು ಆದಷ್ಟೂ ಕಡಿಮೆ ಮಾಡಿ ಪರಿಸರ ಸಂರಕ್ಷಣೆ ಮಾಡವುದಲ್ಲದೆ ಜೀವ ವೈವಿಧ್ಯವನ್ನು ರಕ್ಷಿಸಬೇಕು ಎಂದರು ಕರೆ ನೀಡಿದರು. ನಾವು ಪರಿಸರದೊಂದಿಗೆ ಸಾಮರಸ್ಯ ಸಾಧಿಸಿದರೆ ಮಾತ್ರ ಸಮತೋಲನದ ಬದುಕು ಸಾಧ್ಯ. ಮಿತಿಮೀರಿದ ಸಂಪನ್ಮೂಲಗಳ ಬಳಕೆ ಯಾವತ್ತೂ ಅಪಾಯಕ್ಕೆ ರಹದಾರಿ ಎಂಬ ಅರಿವು ನಮಗಿರಬೇಕು. ಕೋವಿಡ್-19 ತಡೆಗಟ್ಟಲು ಲಾಕ್‍ಡೌನ್ ಮಾಡಿದ ಸಂದರ್ಭದಲ್ಲಿ ಪರಿಸರ ಮಾಲಿನ್ಯ ಗಮನಾರ್ಹವಾಗಿ ಕಡಿಮೆಯಾಗಿದೆ. ಮನುಷ್ಯನಿಗೆ ತೊಂದರೆಯಾದೂ ಪ್ರಕೃತಿ ಪುನಶ್ಛೇತನಗೊಳ್ಳಲು ಇದೊಂದು ಸದಾವಕಾಶವಾಯಿತು. ಹಸಿರು ನಮ್ಮ ಉಸಿರಾದಾಗ ಮಾತ್ರ ವಿಶ್ವ ಪರಿಸರ ದಿನಾಚರಣೆ ಅರ್ಥಪೂರ್ಣವಾಗಿರುತ್ತದೆ. ಈ ದಿಸೆಯಲ್ಲಿ ನಾವೆಲ್ಲಾ ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದರು.


from India & World News in Kannada | VK Polls https://ift.tt/2z4HLoG

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...