ಇಸ್ಲಾಮಾಬಾದ್: ಮಾರಕ ಕೊರೊನಾ ವೈರಸ್‌ನ್ನು ದೇಶದ ನೆಲದಿಂದ ಒದ್ದೊಡಿಸಲು ಭಾರತದ ಪ್ರಧಾನಿ ಪ್ರಧಾನಿ ಮೋದಿ ಹಗಲಿರುಳೂ ದುಡಿಯುತ್ತಿದ್ದಾರೆ. ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ನಮ್ಮ ಜಯ ಶತಸಿದ್ಧ ಎಂದು ಜನರಲ್ಲಿ ಭರವಸೆ ಮೂಡಿಸುತ್ತಿದ್ದಾರೆ. ಇದಕ್ಕೆ ವ್ಯತಿರಿಕ್ತವಾಗಿ ಪ್ರಧಾನಿ ಮಾತ್ರ ಕೊರೊನಾ ವೈರಸ್ ಹೋರಾಟದ ಕುರಿತು ನಕಾರಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ಮೂಲಕ ಜನರ ಮಾನಸಿಕ ಸ್ಥೈರ್ಯ ಕುಸಿಯಲು ಪರೋಕ್ಷವಾಗಿ ಕಾರಣರಾಗಿದ್ದಾರೆ. ಕೊರೊನಾ ವೈರಸ್ ವಿರುದ್ಧದ ಹೋರಾಟದ ಭಾಗವಾಗಿ ಪಾಕಿಸ್ತಾನದಲ್ಲಿ ಹೇರಲಾಗಿರುವ ಲಾಕ್‌ಡೌನ್‌ನ್ನು ತೆರವುಗೊಳಿಸುವ ಕುರಿತು ಮಾತನಾಡಿರುವ ಇಮ್ರಾನ್ ಖಾನ್, ದೇಶದ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಲಾಕ್‌ಡೌನ್ ತೆರವುಗೊಳಿಸುವುದು ಅನಿವಾರ್ಯ ಎಂದು ಹೇಳಿದ್ದಾರೆ. ಕೊರೊನಾ ವೈರಸ್‌ನೊಂದಿಗೆ ಬದುಕುವುದನ್ನು ಕಲಿಯಿರಿ ಎಂದು ಪಾಕಿಸ್ತಾನ ಪ್ರಜೆಗಳಿಗೆ ಪುಕ್ಕಟೆ ಸಲಹೆ ನೀಡಿರುವ ಇಮ್ರಾನ್ ಖಾನ್, ಲಾಕ್‌ಡೌನ್ ತೆರವುಗೊಳಿಸಿ ಸರ್ಕಾರದ ಬೊಕ್ಕಸ ತುಂಬಿಸಿ ಎಂದು ಪರೋಕ್ಷ ಮನವಿ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಇಮ್ರಾನ್ ಖಾನ್, ಲಾಕ್‌ಡೌನ್ ಸಡಿಲಿಸಿ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡುವುದು ಇಂದಿನ ತುರ್ತು ಅವಶ್ಯವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕೊರೊನಾ ವೈರಸ್ ಜೊತೆಗೆ ಬದುಕುವುದನ್ನು ಪಾಕಿಸ್ತಾನಿಗಳು ರೂಢಿಸಿಕೊಳ್ಳಬೇಕಿದೆ ಎಂದು ಹೇಳಿರುವ ಇಮ್ರಾನ್ ಖಾನ್, ದೇಶವನ್ನು ಆರ್ಥಿಕ ಹಿಂಜರಿಕೆಯಿಂದ ರಕ್ಷಿಸಲು ಲಾಕ್‌ಡೌನ್ ತೆರವುಗೊಳಿಸುವುದೊಂದೇ ಮಾರ್ಗ ಎಂದು ಹೇಳಿದ್ದಾರೆ. ಪಾಕಿಸ್ತಾನದಲ್ಲಿ ಒಟ್ಟು 72,160 ಕೊರೊನಾ ವೈರಸ್ ಪ್ರಕರಣ ಪತ್ತೆಯಾಗಿದ್ದು, ಮಾರಕ ವೈರಾಣುವಿಗೆ ಇದುವರೆಗೂ 1,543 ಜನ ಮೃತಪಟ್ಟಿದ್ದಾರೆ. ಅಲ್ಲದೇ ಕೊರೊನಾ ವೈರಸ್ ನಿಯಂತ್ರಣಕ್ಕೆ ಪಾಕ್ ಸರ್ಕಾರ ಕೈಗೊಂಡಿರುವ ನಿರ್ಣಯಗಳೂ ಜಾಗತಿಕವಾಗಿ ಗಮನ ಸೆಳೆದಿಲ್ಲ ಎಂಬುದು ದಿಟ.
from India & World News in Kannada | VK Polls https://ift.tt/2Av1yho