ಜಮ್ಮು-ಕಾಶ್ಮೀರ: ಉಗ್ರರ ಅಟ್ಟಹಾಸಕ್ಕೆ ಯೋಧ ಹಾಗೂ ನಾಗರಿಕ ಸಾವು

ಶ್ರೀನಗರ: ಗಸ್ತು ತಿರುಗುತ್ತಿದ್ದ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಿದ ಪರಿಣಾಮ ಒಬ್ಬ ಯೋಧ ಹಾಗೂ ನಾಗರಿಕರೊಬ್ಬರು ಸಾವಿಗೀಡಾಗಿದ್ದಾರೆ. ಜಮ್ಮು ಕಾಶ್ಮೀರದ ಬಾರಾಮುಲ್ಲ ಜಿಲ್ಲೆಯ ಸೋಪೊರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಈ ವೇಳೆ ಮೂವರು ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಎಂದಿನಂತೆ ಇಂದು ಕೂಡ ಸಿಆರ್‌ಪಿಎಫ್‌ ಸೋಪೊರ್‌ನಲ್ಲಿ ಗಸ್ತು ತಿರುಗುತ್ತಿದ್ದರು. ಈ ವೇಳೆ ಯೋಧರನ್ನು ಗುರಿಯಾಗಿಸಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಮೂವರು ಭದ್ರತಾ ಪಡೆ ಸಿಬ್ಬಂದಿ ಮತ್ತು ನಾಗರಿಕರೊಬ್ಬರು ಗಾಯಗೊಂಡಿದ್ದಾರೆ. ಇನ್ನು ಉಗ್ರರು ದಾಳಿ ನಡೆಸುತ್ತಿದ್ದಂತೆ ಆ ಪ್ರದೇಶವನ್ನು ಭದ್ರತಾ ಪಡೆ ಸುತ್ತುವರಿದಿದ್ದು, ಉಗ್ರರ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಕಾಶ್ಮೀರದ ಹಲವು ಭಾಗಗಳಲ್ಲಿ ಉಗ್ರರು ಪದೇ ಪದೇ ಬಾಲ ಬಿಚ್ಚುತ್ತಿದ್ದು, ಭಾರತೀಯ ಸೇನೆ ತಕ್ಕ ಪಾಠ ಕಲಿಸುತ್ತಿದ್ದರೂ ಅವರ ನರಿಬುದ್ಧಿ ಬಿಡುತ್ತಿಲ್ಲ. ಇದೀಗ ಮತ್ತೊಮ್ಮೆ ಬಾಲ ಬಿಚ್ಚಿರುವ ಉಗ್ರರು ಒಬ್ಬ ಯೋಧನ ಸಾವಿಗೆ ಕಾರಣರಾಗಿದ್ದಾರೆ.


from India & World News in Kannada | VK Polls https://ift.tt/2BTghUc

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...