ಕೋವಿಡ್‌ ಚಿಕಿತ್ಸೆ: ಪಂಚತಾರಾ ಹೋಟೆಲ್‍ಗಳನ್ನು ವಶಕ್ಕೆ ಪಡಿಯಿರಿ, ಸರ್ಕಾರಕ್ಕೆ ಎಚ್‌.ಕೆ ಪಾಟೀಲ್‌ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌-19 ಸೋಂಕು ಅಟ್ಟಹಾಸ ಮೆರೆಯುತ್ತಿದೆ. ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆ ಸಾಮರ್ಥ್ಯವೂ ಕಡಿಮೆಯಾಗಿದೆ. ಈ ನಿಟ್ಟಿನಲ್ಲಿ ಪಂಚತಾರಾ ಹೋಟೆಲ್‌ಗಳನ್ನು ಸರ್ಕಾರ ವಶಕ್ಕೆ ಪಡೆಯಬೇಕು ಎಂದು ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಎಚ್‌.ಕೆ ಪಾಟೀಲ್ ಆಗ್ರಹಿಸಿದ್ದಾರೆ. ಈ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರಿಗೆ ಪತ್ರವನ್ನು ಬರೆದಿದ್ದು ಈಗಿರುವ ಹಾಸಿಗೆ ಸಾಮರ್ಥ್ಯವನ್ನು 10 ಪಟ್ಟು ಹೆಚ್ಚಿಸುವ ನಿಟ್ಟಿನಲ್ಲಿ 5 ಸ್ಟಾರ್‌ ಹಾಗೂ 3 ಸ್ಟಾರ್‌ ಹೋಟೆಲ್‍ಗಳನ್ನು ವಶಕ್ಕೆ ಪಡಿಯಿರಿ ಈ ಮೂಲಕ ಪರಿಣಾಮಕಾರಿಯಾದ ವ್ಯವಸ್ಥೆ ರೂಪಿಸಿ ಎಂದು ಒತ್ತಾಯಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಬೆಡ್‌ ಕೊರತೆ ಎದುರಾಗಿರುವ ಸಂಕಷ್ಟದ ಸಂದರ್ಭದಲ್ಲಿ ರಾಜ್ಯಾದ್ಯಂತ ಇರುವ ಪಂಚತಾರಾ ಆಸ್ಪತ್ರೆಗಳು ಹಾಗೂ ಹೋಟೆಲ್‌ಗಳನ್ನು ಸರ್ಕಾರ ಆದೇಶ ಅಥವಾ ಸುಗ್ರೀವಾಜ್ಞೆಯ ಮೂಲಕ ತಕ್ಷಣವೇ ತನ್ನ ವಶಕ್ಕೆ ಪಡೆದುಕೊಂಡು ಆಡಳಿತಾಧಿಕಾರಿಗಳನ್ನು ನೇಮಿಸಬೇಕು. ಇವುಗಳನ್ನು ಕೋವಿಡ್‌ - 19 ಚಿಕಿತ್ಸಾ ಕೇಂದ್ರ ಅಥವಾ ಆಸ್ಪತ್ರೆಗಳಾಗಿ ಪರಿವರ್ತನೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೊಣೆಗಾರಿಕೆಯನ್ನು ಮತ್ತು ಜಾವಾಬ್ದಾರಿಯನ್ನು ನಿರ್ವಹಣೆ ಮಾಡಬೇಕಾಗಿದೆ. ಈ ಜಾವಾಬ್ದಾರಿಯನ್ನು ನಿರ್ವಹಿಸುವ ಸಂದರ್ಭದಲ್ಲಿ ಸರ್ಕಾರ ಪಾರದರ್ಶಕ, ಭ್ರಷ್ಟಾಚಾರ ಮುಕ್ತ ಮತ್ತು ಸಮಯೋಚಿತ ಜನಪರ ನಿರ್ಧಾರಗಳನ್ನು ಕಾಲಕಾಲಕ್ಕೆ ಕೈಗೊಳ್ಳಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಕೋವಿಡ್‌ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ದರವನ್ನು ಪ್ರಕಟಿಸಲಾಗಿದೆ. ಆದರೆ ಆಸ್ಪತ್ರೆಗಳು ಈ ದರವನ್ನು ಒಪ್ಪಿಕೊಂಡಿಲ್ಲ. ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಸಂಘರ್ಷಕ್ಕೆ ಇಳಿಯುವ ಕಾಲ ಇದಲ್ಲ. ತಕ್ಷಣವೇ ಭಾರತೀಯ ವೈದ್ಯ ಸಂಘದ ಜೊತೆಗೆ ಸಭೆ ಏರ್ಪಡಿಸಿ ಸಮಸ್ಯೆ ಬಗೆಹರಿಸಿ ಎಂದು ಎಚ್‌ಕೆ ಪಾಟೀಲ್ ಒತ್ತಾಯಿಸಿದ್ದಾರೆ.


from India & World News in Kannada | VK Polls https://ift.tt/3g2EtC2

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...