ದೇಶವನ್ನು ಮತ್ತೆ ಕಟ್ಟುವ ಸಾಮೂಹಿಕ ಪ್ರಯತ್ನ ಯಶಸ್ವಿ ಕಾಣಲಿದೆ: ಪ್ರಧಾನಿ ಮೋದಿ!

ನವದೆಹಲಿ: ಕೊರೊನಾ ವೈರಸ್ ಹಾವಳಿಯಿಂದಾಗಿ ಎದುರಾಗಿರುವ ಎಲ್ಲಾ ಸಂಕಷ್ಟಗಳನ್ನು ಮೀರಿ ಭಾರತ ಯಶಸ್ವಿಯಾಗಲಿದೆ ಎಂದು ಮತ್ತೊಮ್ಮೆ ದೇಶವಾಸಿಗಳಿಗೆ ಭರವಸೆ ನೀಡಿದ್ದಾರೆ. 'ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ರೋಜಗಾರ್ ಅಭಿಯಾನ್'ಅಡಿಯಲ್ಲಿ ಉತ್ತರ ಪ್ರದೇಶದ ವಲಸೆ ಕಾರ್ಮಿಕರಿಗಾಗಿ ಉದ್ಯೋಗ ಅಭಿಯಾನವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ದೇಶವನ್ನು ಮತ್ತೆ ಕಟ್ಟುವ ಸಾಮೂಹಿಕ ಪ್ರಯತ್ನ ಯಶಸ್ವಿ ಕಾಣಲಿದೆ ಎಂದು ಹೇಳಿದರು. ಪ್ರಧಾನಿ ಮೋದಿ ಅವರ ಭಾಷಣದ ಪ್ರಮುಖ ಅಂಶಗಳು:
  • ದೇಶ ಕೊರೊನಾ ವೈರಸ್ ಹಾವಳಿಯಿಂದ ಎದುರಾಗಿರುವ ಸಂಕಷ್ಟಗಳನ್ನು ಮೀರಿ ಯಶಸ್ಸು ಕಾಣಲಿದೆ.
  • ಕೊರೊನಾ ವೈರಸ್‌ನಿಂದ ದೇಶದ ಎಲ್ಲ ಜನ ಸಮುದಾಯಗಳೂ ಸಂಕಷ್ಟ ಎದುರಿಸಿವೆ.
  • ಕೊರೊನಾ ವೈರಸ್‌ನಿಂದ ಮುಕ್ತಿ ಯಾವಾಗ ಸಿಗಲಿದೆ ಎಂಬುದು ನಮಗೆ ಇನ್ನೂ ತಿಳಿದಿಲ್ಲ.
  • ಸಾಮಾಜಿಕ ಅಂತರವೊಂದೇ ಕೊರೊನಾ ವೈರಸ್ ಹಾವಳಿಯನ್ನು ತಡೆಗಟ್ಟಲು ಸಾಧ್ಯ.
  • ವಲಸೆ ಕಾರ್ಮಿಕರು ಈ ದೇಶದ ಅಭಿವೃದ್ಧಿಯಲ್ಲಿ ಅತ್ಯಂತ ಮಹತ್ತರವಾದ ಪಾತ್ರ ನಿರ್ವಹಿಸುತ್ತಿದ್ದಾರೆ.
  • ಶ್ರಮದ ತಾಕತ್ತು ಏನು ಎಂಬುದು ವಲಸೆ ಕಾರ್ಮಿಕರು ಇಡೀ ವಿಶ್ವಕ್ಕೆ ತೋರಿಸಿಕೊಟ್ಟಿದ್ದಾರೆ.
  • ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ವಲಸೆ ಕಾರ್ಮಿಕರ ಭವಿಷ್ಯ ಸುಭದ್ರವಾಗಲಿದೆ ಎಂಬ ಭರವಸೆ ಇದೆ.
  • ಸಂಕಷ್ಟದ ಸಮಯದಲ್ಲಿ ಧೈರ್ಯ ತೋರುವವನೇ ಎಲ್ಲಾ ಸಂಕಷ್ಟಗಳನ್ನು ಎದುರಿಸಿ ಗೆಲುವು ಸಾಧಿಸುತ್ತಾನೆ.
  • ಆತ್ಮ ನಿರ್ಭರ ಭಾರತ ಯೋಜನೆಯ ಮೂಲಕ ಭಾರತ ಕೂಡ ಯಶಸ್ಸಿನ ಹಾದಿಯಲ್ಲಿ ಸಾಗುವ ಮೂಲಕ ಗೆಲುವು ಸಾಧಿಸಲಿದೆ.
  • ಲಾಕ್‌ಡೌನ್ ಸಮಯದಲ್ಲಿ ತಮ್ಮ ತಮ್ಮ ಸ್ವಂತ ರಾಜ್ಯಗಳಿಗೆ ತೆರಳಲು ಬಯಸಿದ ವಲಸೆ ಕಾರ್ಮಿಕರಿಗೆ ವಿಶೇಷ ರೈಲು ಸೇವೆ ಒದಗಿಸಿದ ತೃಪ್ತಿ ಇದೆ.
  • ತಂದೆಯ ಸಾವಿನ ಸಮಯದಲ್ಲಿ ಅಂತ್ಯಕ್ರಿಯೆಗೆ ಹೋಗದೇ ಉತ್ತರಪ್ರದೇಶದ ಜನರಿಗಾಗಿ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ನಮನ ಸಲ್ಲಿಸುತ್ತೇನೆ.
  • ಕೊರೊನಾ ಹಾವಳಿಯ ಈ ಸಂದರ್ಭದಲ್ಲಿ ಉತ್ತರ ಪ್ರದೇಶ ಕೈಗೊಂಡ ಕ್ರಮಗಳು ಇಡೀ ದೇಶಕ್ಕೆ ಮಾದರಿಯಾಗಿದೆ.
ಹೀಗೆ ಪ್ರಧಾನಿ ಮೋದಿ ಉತ್ತರ ಪ್ರದೇಶದ ವಲಸೆ ಕಾರ್ಮಿಕರಿಗಾಗಿ ಉದ್ಯೋಗ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. ಸಮಾರಂಭದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.


from India & World News in Kannada | VK Polls https://ift.tt/383xFBJ

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...