ಖಾಸಗಿ ಆಸ್ಪತ್ರೆಗಳು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ, ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ಖಾಸಗಿ ಮೆಡಿಕಲ್ ಆಸ್ಪತ್ರೆಗಳು ಅಥವಾ ಕಾಲೇಜುಗಳು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಹಾಗಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಲವು ಕಡೆಗಳಲ್ಲಿ ಇಂತಹ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿರುವ ಕೆಲವು ಖಾಸಗಿ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜುಗಳು ಕೋವಿಡ್‌ ಚಿಕಿತ್ಸೆಗೆ ನಿರಾಕರಣೆ ಮಾಡುತ್ತಿದೆ. ಇದು ಸರ್ಕಾರದ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಮ್ ವಿಜಯಭಾಸ್ಕರ್‌ ಈ ಆದೇಶವನ್ನು ಹೊರಡಿಸಿದ್ದಾರೆ. ಆದೇಶದಲ್ಲಿ ಎಲ್ಲಾ ಖಾಸಗಿ ಆಸ್ಪತ್ರೆಗಳು ಕೋವಿಡ್‌ ಚಿಕಿತ್ಸೆಯನನ್ನು ನೀಡುವಂತೆ ಸೂಚನೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಚಿಕಿತ್ಸೆಯನ್ನು ನಿರಾಕರಣೆ ಮಾಡದಂತೆ ಸೂಚನೆ ನೀಡಲಾಗಿದೆ. ಒಂದು ವೇಳೆ ಚಿಕಿತ್ಸೆಗೆ ನಿರಾಕರಣೆ ಮಾಡಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ‌ 2005 ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಸ್ಥಾಪನೆ ಅದಿನಿಯಮ 2017 ಪ್ರಕಾರ ಕಾನೂನು ರೀತಿಯ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಲಾಗಿದೆ


from India & World News in Kannada | VK Polls https://ift.tt/3eBpVcq

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...