ಟಿಪ್ಪರ್ - ಬೈಕ್ ನಡುವೆ ಅಪಘಾತ: ಬ್ಯಾಂಕ್ ಉದ್ಯೋಗಿ ಸ್ಥಳದಲ್ಲೇ ಸಾವು

ರಾಮನಗರ: ಟಿಪ್ಪರ್ ಮತ್ತು ಬೈಕ್ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಖಾಸಗಿ ಬ್ಯಾಂಕ್ ಉದ್ಯೋಗಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಮಾಯಗಾನಹಳ್ಳಿ ಹೆದ್ದಾರಿ ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ ಅನಂತ್ ಕಾಮತ್(24) ಎಂಬುವವರಾಗಿದ್ದು, ಅವರು ರಾಮನಗರದ ಫೆಡರಲ್ ಬ್ಯಾಂಕ್‌ನಲ್ಲಿ ಕೆಲ ಮಾಡುತ್ತಿದ್ದರು. ನಿತ್ಯವೂ ಬೆಂಗಳೂರಿನಿಂದ ರಾಮನಗರಕ್ಕೆ ಕೆಲಸಕ್ಕೆಂದು ಬೈಕ್‌ನಲ್ಲಿ ಹೋಗುತ್ತಿದ್ದ ಅನಂತ್ ಕಾಮತ್ ಇಂದು ಕೂಡ ಕೆಲಸಕ್ಕೆ ಹೋಗುತ್ತಿದ್ದರು. ಈ ವೇಳೆ ಮಾಯಗಾನ ಹಳ್ಳಿ ಸಮೀಪ ತಲುಪಬೇಕಾದರೆ ಹಿಂದಿನಿಂದ ರಭಸವಾಗಿ ಬಂದ ಟಿಪ್ಪರ್ ಅನಂತ್ ಕಾಮತ್ ಬೈಕ್‌ಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಅವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಲಾರಿ ಚಾಲಕನ ವಿರುದ್ಧ ರಾಮನಗರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


from India & World News in Kannada | VK Polls https://ift.tt/2NFRvJV

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...