ಮಾಲಿನ್ಯ ನಿಯಂತ್ರಣ ಮಂಡಳಿ ಡಿಜಿಟಲ್ ಅಭಿಯಾನಕ್ಕೆ ಸಿಎಂ ಯಡಿಯೂರಪ್ಪ ಮೆಚ್ಚುಗೆ

ಬೆಂಗಳೂರು: ವಿಶ್ವ ಪರಿಸರ ದಿನಾಚರಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಹಮ್ಮಿಕೊಂಡಿರುವ ಡಿಜಿಟಲ್ ಅಭಿಯಾನ 25 ಲಕ್ಷಕ್ಕೂ ಹೆಚ್ಚು ಜನರನ್ನು ತಲುಪಿರುವ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಈ ಬಾರಿ ಪರಿಸರ ದಿನಾಚರಣೆಯ ವಿಷಯ ‘ಜೀವ ವೈವಿಧ್ಯ’. ಜೀವ ವೈವಿಧ್ಯ ಇದ್ದಾಗ ಮಾತ್ರ ಪರಿಸರ ಸಮತೋಲನ ಕಾಪಾಡಲು ಸಾಧ್ಯ,” ಎಂದು ಅಭಿಪ್ರಾಯಪಟ್ಟರು. ಇತ್ತೀಚೆಗೆ ಕೋವಿಡ್ 19ರ ನಿಯಂತ್ರಣಕ್ಕಾಗಿ ಲಾಕ್‌ಡೌನ್ ಘೋಷಣೆಯಿಂದಾಗಿ ಪರಿಸರ ಮಾಲಿನ್ಯ ಗಣನೀಯವಾಗಿ ಕಡಿಮೆಯಾಗಿರುವುದು ಸಮಾಧಾನಕರ ವಿಷಯ ಎಂದು ಅವರು ತಿಳಿಸಿದರು.

ಸಮಾರಂಭದಲ್ಲಿ ಪರಿಸರ ಗೀತೆ, ಯೂಟ್ಯೂಬ್ ಚಾನಲ್ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಬಳಕೆದಾರ ಸ್ನೇಹಿ ವೆಬ್‌ಸೈಟ್‌ಗೆ ಚಾಲನೆ ನೀಡಲಾಯಿತು. ಅರಣ್ಯ ಸಚಿವ ಆನಂದ್ ಸಿಂಗ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಅಧ್ಯಕ್ಷ ವಿಜಯ್ ಕುಮಾರ್ ಗೋಗಿ, ಸದಸ್ಯ ಕಾರ್ಯದರ್ಶಿ ಶ್ರೀನಿವಾಸುಲು ಮೊದಲಾದವರು ಉಪಸ್ಥಿತರಿದ್ದರು.


from India & World News in Kannada | VK Polls https://ift.tt/2zUD2qf

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...