ಕೊರೊನಾ ನಿಯಂತ್ರಣ: ಕಂಟೈನ್ಮೆಂಟ್‌ ವಲಯಗಳಲ್ಲಿ ಬಿಗಿ ಕ್ರಮ, ಬಸವರಾಜ ಬೊಮ್ಮಾಯಿ

ಬೆಂಗಳೂರು: ಕಂಟೈನ್ಮೆಂಟ್‌ ವಲಯದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಚರ್ಚೆ ನಡೆಸಲು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದೇನೆ. ಮುಂಜಾಗರೂಕತಾ ಕ್ರಮವಾಗಿ ಬೆಂಗಳೂರಿನಲ್ಲಿ ಕಂಟೈನ್ಮೆಂಟ್‌ ವಲಯಗನ್ನು ಮತ್ತಷ್ಟು ಬಿಗಿಗೊಳಿಸುತ್ತೇವೆ ಎಂದರು. ನಗರದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೋಂ ಕ್ವಾರಂಟೈನ್ ಮೇಲೆಯೂ ಮತ್ತಷ್ಟು ನಿಗಾ ಇಡಲಾಗುವುದು. ಅಲ್ಲದೆ ಬಿಬಿಎಂಪಿ ಹಾಗೂ ಪೊಲೀಸ್ ಅಧಿಕಾರಿಗಳ ಸಮನ್ವಯತೆ ಸಾಧಿಸಲು ಸಭೆ ನಡೆಯಲಾಗುವುದು ಎಂದು ಮಾಹಿತಿ ನೀಡಿದರು. ಸೋಂಕು ನಿಯಂತ್ರಣ ನಿಟ್ಟಿನಲ್ಲಿ ರಾತ್ರಿ 8 ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಫ್ಯೂ ಸಮರ್ಪಕ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಸಿದ್ದರೆ ದಂಡ ವಿಧಿಸುವುದು ಹಾಗೂ ಮಾಸ್ಕ್ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ ಎಂದರು.


from India & World News in Kannada | VK Polls https://ift.tt/2BRwGIP

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...