ಕೇಂದ್ರದ ವಿರುದ್ಧ ಕಾಂಗ್ರೆಸ್ ಹೋರಾಟ, ಸೋಮವಾರ ರಾಜಭವನದ ಮುಂದೆ ಪ್ರತಿಭಟನೆ

ಬೆಂಗಳೂರು: ರಾಜಸ್ಥಾನದ ರಾಜಕೀಯ ಸನ್ನಿವೇಶದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸೋಮವಾರ ದೇಶವ್ಯಾಪ್ತಿ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ರಾಜ್ಯದಲ್ಲೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಪ್ರಜಾಪ್ರಭುತ್ವ ಉಳಿಸಿ ಎಂಬ ಹೆಸರಿನಲ್ಲಿ ಸೋಮವಾರ ರಾಜಭವನದ ಮುಂಭಾಗದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯನ್ನು ನಡೆಸಲಿದ್ದಾರೆ. ಕೇಂದ್ರ ಸರ್ಕಾರ ಪ್ರಜಾಪ್ರಭುತ್ವ ವಿರೋಧಿಯಾಗಿ ನಡೆಯುತ್ತಿದೆ ಹಾಗೂ ಸಂವಿಧಾನದ ವಿರೋಧವಾಗಿ ನಡೆಯುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ರಾಜಭವನದ ಮುಂದೆ ಪ್ರತಿಭಟನೆಯನ್ನು ಕಾಂಗ್ರೆಸ್ ಮುಖಂಡರು ನಡೆಸಲಿದ್ದಾರೆ. ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ಸಂಸದರು, ಶಾಸಕರು ಹಾಗೂ ಬೆಂಗಳೂರು ನಗರದ ಡಿಸಿಸಿ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎಂದು ಕಾಂಗ್ರೆಸ್ ತಿಳಿಸಿದೆ.


from India & World News in Kannada | VK Polls https://ift.tt/3g2qHA2

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...