ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ವಿವಾದ, ರೈತ ಮುಖಂಡರ ಸಭೆ ಕರೆದ ಸಿದ್ದರಾಮಯ್ಯ

ಬೆಂಗಳೂರು: ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿರುವ ರಾಜ್ಯ ಸರ್ಕಾರದ ನಡೆ ವಿವಾದಕ್ಕೆ ಕಾರಣವಾಗಿದ್ದು ಈ ವಿಚಾರವಾಗಿ ಚರ್ಚೆ ನಡೆಸಲು ವಿರೋಧ ಪಕ್ಷದ ನಾಯಕ ಬುಧವಾರ ರೈತ ಸಂಘಟನೆಗಳ ಮುಖಂಡರ ಸಭೆಯನ್ನು ಕರೆದಿದ್ದಾರೆ. ಬುಧವಾರ ಬೆಳಗ್ಗೆ 11 ಗಂಟೆಗೆ ರಾಜ್ಯದ ಪ್ರಮುಖ ರೈತ ಸಂಘಟನೆಗಳ ಮುಖಂಡರ ಜೊತೆಗೆ ಸಿದ್ದರಾಮಯ್ಯ ಸಭೆ ನಡೆಸುವ ಮೂಲಕ ಕಾಯ್ದೆ ತಿದ್ದುಪಡಿಯ ವಿರುದ್ಧ ಮುಂದಿನ ಹೋರಾಟಕ್ಕೆ ಸಜ್ಜಾಗಿದ್ದಾರೆ. ಭೂಸುಧಾಕರಣಾ ಕಾಯ್ದೆಗೆ ತಿದ್ದುಪಡಿ ಮಾಡಿರುವ ಸರ್ಕಾರದ ನಡೆ ರೈತ ವಿರೋಧಿ ಅಂದಿದ್ದ ಸಿದ್ದರಾಮಯ್ಯ ಈ ತಿದ್ದುಪಡಿಯ ಹಿಂದೆ ದೊಡ್ಡ ಹಗರಣವಿದ್ದು ಗಣಿ ಹಗರಣಕ್ಕಿಂತ ದೊಡ್ಡದು ಎಂದಿದ್ದರು. ರೈತರಿಗೆ ವರದಾನವಾಗಿದ್ದ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ರೈತರಿಗೆ ಮರಣ ಶಾಸನ ಬರೆಯಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ್ದರು. ಅಲ್ಲದೆ ತಿದ್ದುಪಡಿಯನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದರು. ಕೋವಿಡ್‌ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಭೂಸುಧಾರಣಾ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ಹೊರಡಿಸುವುದಿಲ್ಲ ಎಂದು ಭಾವಿಸಿದ್ದೆ. ಆದರೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ಮೂಲಕ ರೈತ ವಿರೋಧಿಯಾಗಿ ನಡೆದುಕೊಂಡಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಕಿಡಿಕಾರಿದ್ದರು. ಇದೀಗ ಇದೇ ವಿಚಾರವನ್ನು ಇಟ್ಟುಕೊಂಡು ಸರ್ಕಾರದ ವಿರುದ್ಧ ಹೋರಾಟ ನಡೆಸಲು ಸಿದ್ದರಾಮಯ್ಯ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ರೈತ ಮುಖಂಡರ ಜೊತೆಗೆ ಮಾತುಕತೆ ನಡೆಸಿ ಮಾಹಿತಿ ಪಡೆದುಕೊಳ್ಳಲಿದ್ದಾರೆ.


from India & World News in Kannada | VK Polls https://ift.tt/32HD28T

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...