ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್‌ಗೆ ಕೋವಿಡ್-19 ತಪಾಸಣೆಯಲ್ಲಿ ನೆಗೆಟಿವ್ ಬಂದಿದೆ. ಈ ವಿಚಾರವನ್ನು ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು ಮರಳಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ. ಕಾರು ಚಾಲಕನಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಕ್ವಾರಂಟೈನ್‌ನಲ್ಲಿದ್ದರು. ಬಳಿಕ ಕೊರೊನಾ ತಪಾಸಣೆಯನ್ನು ಮಾಡಿಕೊಂಡಿದ್ದರು. "ತನ್ನ ಕಾರು ಚಾಲಕನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಕಾರಣಕ್ಕಾಗಿ ನಾನು ನಾಲ್ಕು ದಿನಗಳ ಕಾಲ ಕ್ವಾರಂಟೈನ್‌ನಲ್ಲಿರುತ್ತೇನೆ. ಕಳೆದ ಮೂರು ತಿಂಗಳಲ್ಲಿ ಐದು ಬಾರಿ ತಪಾಸಣೆ ಮಾಡಿರುತ್ತೇನೆ" ಎಂದು ಟ್ವೀಟ್ ಮಾಡಿದ್ದರು. ಕಾರು ಚಾಲಕನಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮತ್ತೊಮ್ಮೆ ತಪಾಸಣೆ ಮಾಡಿದ್ದು ಮಂಗಳವಾರ ಇದರ ಫಲಿತಾಂಶ ಬಂದಿದೆ. ಫಲಿತಾಂಶದಲ್ಲಿ ಕೋವಿಡ್ ನೆಗೆಟಿವ್ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ಸಾಕಷ್ಟು ಮಂದಿ ಪೊಲೀಸರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ವಹಣೆ ಮಾಡುವಾಗ ಸಾಕಷ್ಟು ಎಚ್ಚರಿಕೆಗಳನ್ನು ವಹಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
from India & World News in Kannada | VK Polls https://ift.tt/30AfUXn