ಮಳೆಗೆ ಮುರಿದ ಸೇತುವೆ; ಗರ್ಭಿಣಿ ಮಹಿಳೆಯನ್ನು ಹೆಗಲಲ್ಲಿ ಹೊತ್ತು ಆಸ್ಪತ್ರೆ ಸೇರಿಸಿದರು..!

ತೆಲಂಗಾಣ: ಗ್ರಾಮಕ್ಕೆ ನಿರ್ಮಿಸಲಾದ ತಾತ್ಕಾಲಿಕ ರಸ್ತೆ ನೀರಿನಲ್ಲಿ ಕೊಚ್ಚಿಕೊಂಡು ಹೋದ ಪರಿಣಾಮ ಗರ್ಭಿಣಿ ಮಹಿಳೆಯೊಬ್ಬರನ್ನು ಹರಿಯುತ್ತಿರುವ ನೆರೆಯ ಮಧ್ಯೆಯೇ ಎತ್ತಿಕೊಂದು ಆಸ್ಪತ್ರೆಗೆ ದಾಖಲಿಸಿದ ಘಟನೆ ತೆಲಂಗಾಣದ ಗುಂಡಾಲ ಜಿಲ್ಲೆಯ ರೊಲ್ಲಗಡ್ಡ ಗ್ರಾಮದಲ್ಲಿ ನಡೆದಿದೆ. ನಿನ್ನೆ ಗುಂಡಾಲದ ರೊಲ್ಲಗಡ್ಡ ಗ್ರಾಮದ ತುಂಬು ಗರ್ಭಿಣಿ ಮಮತಾ ಅವರಿಗೆ ಪ್ರಸವ ವೇದನೆ ಕಾಣಿಸಿಕೊಂಡಿತ್ತು. ಈ ವೇಳೆ ಮನೆಯವರು ಆಂಬುಲೆನ್ಸ್‌ಗೆ ಕರೆ ಮಾಡಿ ಬರೋಕೆ ಹೇಳಿದ್ದರು. ಆದ್ರೆ ಊರಿಗೆ ಸಂಪರ್ಕಿಸುವ ಮಣ್ಣಿನ ರಸ್ತೆ ವಿಪರೀತ ಮಳೆಯಿಂದಾಗಿ ಕೊಚ್ಚಿಕೊಂಡು ಹೋದ ಪರಿಣಾಮ ನದಿ ದಾಟಿ ಬರಲು ಆಂಬುಲೆನ್ಸ್‌ಗೆ ಸಾಧ್ಯವಾಗಿಲ್ಲ. ಹೀಗಾಗಿ ಮನೆಯವರು ಗರ್ಭಿಣಿ ಮಹಿಳೆಯನ್ನು ಹೆಗಲ ಮೇಲೆಯೇ ಹೊತ್ತುಕೊಂಡು ನದಿ ದಾಟಿದ್ದಾರೆ. ಸದ್ಯ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗ್ತಿದೆ. ಮತ್ತು ಮಹಿಳೆ ಆರೋಗ್ಯವಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಗ್ರಾಮದಲ್ಲಿ ಬುಡಕಟ್ಟು ಸಮುದಾಯದ ಜನರು ಹೆಚ್ಚು ವಾಸಿಸುತ್ತಿದ್ದು, ಆಸ್ಪತ್ರೆ ಸೇರಿದಂತೆ ಯಾವುದೇ ಸೌಕರ್ಯಗಳಿಗೆ ಸುಮಾರು ಎಂಟು ಕಿ.ಮೀ ಕ್ರಮಿಸಬೇಕಾಗುತ್ತದೆ. ಪ್ರತೀ ವರ್ಷ ಮಳೆಗಾಲದ ಅವಧಿಯಲ್ಲಿ ಈ ಭಾಗದ ಜನರು ಒಂದಲ್ಲೊಂದು ಸಮಸ್ಯೆಯನ್ನು ಎದುರಿಸುತ್ತಿದ್ದು, ಮುಖ್ಯವಾಗಿ ಮೂಲಭೂತ ಸಮಸ್ಯೆಗಳು ಇಲ್ಲದೆ ಜನ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.


from India & World News in Kannada | VK Polls https://ift.tt/2WTKcTA

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...