ಆಪರೇಷನ್ ಕಮಲ: ಕಾಂಗ್ರೆಸ್‌ನಿಂದ ‘ಪ್ರಜಾಪ್ರಭುತ್ವಕ್ಕಾಗಿ ಮಾತನಾಡು’ ಟ್ವೀಟ್‌ ಅಭಿಯಾನ

ಬೆಂಗಳೂರು: ಬಿಜೆಪಿ ಆಪರೇಷನ್‌ ಕಮಲದ ಮೂಲಕ ಅಧಿಕಾರದಾಹಿ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ‘ಪ್ರಜಾಪ್ರಭುತ್ವಕ್ಕಾಗಿ ಮಾತನಾಡು’ ಎಂಬ ಹೆಸರಿನಲ್ಲಿ ಟ್ವಿಟ್ಟರ್‌ ಅಭಿಯಾನವನ್ನು ನಡೆಸುತ್ತಿದೆ. ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದ ಹಲವಾರು ನಾಯಕರು ವಿಡಿಯೋ ಟ್ವೀಟ್‌ ಮಾಡುವ ಮೂಲಕ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಟ್ವಿಟ್ಟರ್‌ನಲ್ಲಿ #SpeakUpForDemocracy ಹ್ಯಾಶ್ ಟ್ಯಾಗ್‌ ಟ್ರೆಂಡ್‌ ಆಗಿದೆ. ಈ ಹ್ಯಾಶ್ ಟ್ಯಾಗ್ ಬಳಸಿಕೊಂಡು ಬಿಜೆಪಿಯ ವಿರುದ್ಧ ಟ್ವೀಟ್‌ ಮಾಡುವ ಮೂಲಕ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ “ಬಿಜೆಪಿಯ ವಾಮಮಾರ್ಗದ, ಅಧಿಕಾರದಾಹಿ ರಾಜಕಾರಣವನ್ನು ನೀವೆಲ್ಲಾ ಗಮನಿಸುತ್ತಿದ್ದೀರ.ಕರ್ನಾಟಕ, ಮಧ್ಯಪ್ರದೇಶಗಳಲ್ಲಿ ಏನಾಯಿತು, ಮಹಾರಾಷ್ಟ್ರದಲ್ಲಿ ಮಧ್ಯರಾತ್ರಿ ಏನು ನಡೆಯಿತು ಎಂದು ನಿಮಗೆ ತಿಳಿದಿದೆ. ಇದೀಗ ರಾಜಸ್ಥಾನದಲ್ಲೂ ಅದೇ ಕೀಳು ರಾಜಕೀಯ ನಡೆಯುತ್ತಿದ್ದು, ಇದನ್ನು ನಾವು ವಿರೋಧಿಸಬೇಕು” ಎಂದಿದ್ದಾರೆ. “ಅಲ್ಲದೆ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಭಾರತ ಎನ್ನುವ ಜಾಗತಿಕ ಹೆಗ್ಗಳಿಕೆಯನ್ನುಬಿಜೆಪಿ ಆಪರೇಷನ್ ಕಮಲ ನಾಶ ಮಾಡುತ್ತಿದ್ದು, ವಿಶ್ವದ ಎದುರು ಭಾರತ ತಲೆ ತಗ್ಗಿಸುವಂತಾಗಿದೆ. ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ನಡೆಗಳ ವಿರುದ್ಧ ಎಲ್ಲರೂ ಸಾಮಾಜಿಕ ಜಾಲತಾಣಗಳಲ್ಲಿ ಧ್ವನಿ ಎತ್ತಬೇಕು” ಎಂದು ಕರೆ ನೀಡಿದ್ದಾರೆ. ಇನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೂಡಾ ಈ ವಿಚಾರವಾಗಿ ಮಾತಾಡಿದ್ದಾರೆ. ಭಾರತ ಕೊರೊನಾದ ವಿರುದ್ಧ ಹೋರಾಟ ನಡೆಸುತ್ತಿದೆ. ಆದರೆ ಇಂತಹ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕೆಲವು ರಾಜ್ಯಗಳಲ್ಲಿ ಬಿಜೆಪಿಯೇತರ ಸರ್ಕಾರವನ್ನು ನಾಶ ಮಾಡಲು ಹೊರಟಿದೆ. ಇದು ಖಂಡನಾರ್ಹ ಎಂದಿದ್ದಾರೆ.


from India & World News in Kannada | VK Polls https://ift.tt/3f0Hp1s

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...