ಕೊರೊನಾ ನಿಯಂತ್ರಣ: ವಲಯವಾರು ಸಭೆ ನಡೆಸುತ್ತಿರುವ ಬಿಎಸ್‌ವೈ

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬುಧವಾರ ವಲಯವಾರು ಸಭೆ ನಡೆಸುವ ಮೂಲಕ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತಾಗಿ ಚರ್ಚೆ ನಡೆಸಿದರು. ಬೆಂಗಳೂರು ನಗರವನ್ನು ಎಂಟು ವಲಯಗಳಾಗಿ ವಿಂಗಡನೆ ಮಾಡಲಾಗಿದ್ದು ಸಚಿವರಿಗೆ ಹಾಗೂ ರಾಜಕೀಯ ಕಾರ್ಯದರ್ಶಿಗಳಿಗೆ ಇದರ ಹೊಣೆಯನ್ನು ನೀಡಲಾಗಿದೆ. ಈ ಎಂಟು ವಲಯಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಎಷ್ಟಿದೆ ಹಾಗೂ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಕುರಿತಾಗಿ ಸಭೆಯಲ್ಲಿ ಮಾಹಿತಿ ಪಡೆಕೊಂಡರು. ಬುಧವಾರ ಬೆಳಗ್ಗೆಯಿಂದ ವಲಯವಾರು ಸಭೆ ಆರಂಭಗೊಂಡಿದೆ. ರಾಜರಾಜೇಶ್ವರಿ ನಗರ ವಲಯ, ದಾಸರಹಳ್ಳಿ,ಬೊಮ್ಮನಹಳ್ಳಿ, ಮಹದೇವಪುರ ವಲಯಗಳ ಸಭೆ ಇಂದು ನಡೆಯಲಿದೆ. ಗುರುವಾರ ಇತರ ನಾಲ್ಕು ವಲಯಗಳ ಸಭೆಯನ್ನು ಸಭೆ ನಡೆಯಲಿದೆ. ಸದ್ಯ ಬೆಂಗಳೂರು ನಗರದಲ್ಲಿ ಜಾರಿಯಲ್ಲಿದ್ದ ಸಂಪೂರ್ಣ ಲಾಕ್‌ಡೌನ್ ತೆರವುಗೊಳಿಸಲಾಗಿದೆ. ಈ ನಡುವೆ ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದನ್ನು ಹೇಗೆ ನಿಯಂತ್ರಣ ಮಾಡಬೇಕು ಹಾಗೂ ಮುಂದಿನ ದಿನಗಳಲ್ಲಿ ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯುತ್ತಿದೆ.


from India & World News in Kannada | VK Polls https://ift.tt/2ZN0EHe

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...