ಕೋವಿಡ್‌ ಭ್ರಷ್ಟಾಚಾರ: ಸರ್ಕಾರದ ವಿರುದ್ಧದ ಆರೋಪಕ್ಕೆ ಎಂಟಿಬಿ ನೀಡಿದ ಸಮರ್ಥನೆಯೇನು?

ಬೆಂಗಳೂರು: ಕೋವಿಡ್‌ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ಮಾಜಿ ಸಚಿವ ಎಂಟಿಬಿ ನಾಗರಾಜ್ ತಮ್ಮದೇ ಆದ ಸಮರ್ಥನೆಯನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದ ಬಗ್ಗೆ ಮಾತನಾಡುವವರಲ್ಲಿ ಯಾರಾದರೂ ಸತ್ಯ ಹರಿಶ್ಚಂದ್ರರಿದ್ದಾರಾ? ಎಂದು ಪ್ರಶ್ನಿಸಿದ್ದಾರೆ. ಎಲ್ಲರ ಅವಧಿಯಲ್ಲೂ ಹಗರಣಗಳು ನಡೆದಿವೆ, ಈ ಕುರಿತಾಗಿ ಸಮಯ ಸಂದರ್ಭ ಬಂದಾಗ ದಾಖಲೆಗಳನ್ನು ನೀಡುತ್ತೇನೆ ಎಂದರು. ಕೊರೊನಾದಂತಹ ಸಂಕಷ್ಟದ ಸಂದರ್ಭದಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಈ ಹಿಂದೆ ಯಾರು ಏನೆಲ್ಲಾ ಮಾಡಿದ್ದಾರೆ ಎಂಬುವುದು ತಿಳಿದಿದೆ. ಹಿಂದೆ ಇದ್ದ ಮುಖ್ಯಮಂತ್ರಿಗಳ ಅಧಿಕಾರದ ಅವಧಿಯಲ್ಲಿ ಏನು ನಡೆದಿದೆ ಎಂಬುವುದು ಜನರಿಗೆ ಗೊತ್ತಿದೆ ಎಂದರು. ಇಲ್ಲಿ ಯಾರೂ ಸತ್ಯಹರಿಶ್ಚಂದ್ರರಿಲ್ಲ, ಯಾರೂ ಕೂಡಾ ಸತ್ಯವಂತ ಧರ್ಮರಾಯರು ಇಲ್ಲ. ನಳ ಮಹಾರಾಜನಂತಹ ಸತ್ಯವಂತರು ಯಾರೂ ಇಲ್ಲ. ಎಲ್ಲಾ ಸಿಎಂಗಳ ಅವಧಿಯಲ್ಲೂ ಭ್ರಷ್ಟಾಚಾರ, ಹಗರಣಗಳು ನಡೆದಿದ್ದು ಈ ಕುರಿತಾಗಿ ದಾಖಲೆಗಳು ಇವೆ ಎಂದು ಕಾಂಗ್ರೆಸ್‌ಗೆ ಚಾಟಿ ಬೀಸಿದರು. ಕೋವಿಡ್‌ ಉಪಕರಣಗಳ ಖರೀದಿಯಲ್ಲಿ ಸುಮಾರು 2000 ಕೋಟಿ ಅವ್ಯವಹಾರ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದಾಖಲೆಗಳ ಜೊತೆಗೆ ಗಂಭೀರ ಆರೋಪ ಮಾಡಿದ್ದರು. ಆದರೆ ಆರೋಪವನ್ನು ಬಿಜೆಪಿ ನಿರಾಕರಿಸಿದೆ.


from India & World News in Kannada | VK Polls https://ift.tt/3hD5Nrz

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...