ಬೆಂಗಳೂರು: ನಿನ್ನೆಯಷ್ಟೇ ನಟಿ ಸುಧಾರಾಣಿ ಅವರನ್ನು ರೋಗಿಯ ಆಸ್ಪತ್ರೆಯ ಗೇಟಿನ ಹೊರಭಾಗದಲ್ಲಿ ಮಧ್ಯರಾತ್ರಿ ಕಾಯುವಂತೆ ಮಾಡಿದ್ದ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದರು. ಸಲೆಬ್ರಿಟಿ ಮಾತ್ರವಲ್ಲದೇ ಯಾರನ್ನೂ ಕೂಡ ಆಸ್ಪತ್ರೆಗಳು ಕಾಯಿಸಬಾರದು ಎಂದು ಎಚ್ಚರಿಕೆ ನೀಡಿದ್ದರು. ಆದರೆ ವೈದ್ಯಕೀಯ ಶಿಕ್ಷಣ ಸಚಿವರು ಯಾವ ಆಸ್ಪತ್ರೆಗೆ ಎಚ್ಚರಿಕೆ ನೀಡಿದ್ದರೋ ಅದೇ ಆಸ್ಪತ್ರೆಯಲ್ಲಿ ಸಚಿವರು ಎಚ್ಚರಿಕೆ ನೀಡಿದ 24 ಗಂಟೆ ಒಳಗೆ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆ ಮತ್ತೊಮ್ಮೆ ಸಚಿವರ ಕೆಂಗಣ್ಣಿಗೆ ಗುರಿಯಾಗಿದ್ದು, ರೋಗಿರೊಬ್ಬರಿಗೆ ಬರೋಬ್ಬರಿ ಐದು ಲಕ್ಷ ರೂಪಾಯಿ ಬಿಲ್ ವಿಧಿಸಿ ಅಚ್ಚರಿ ಮೂಡಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಡಾ.ಸುಧಾಕರ್, ಬೆಂಗಳೂರಿನ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಯಿಂದ ಸಾರ್ವಜನಿಕರಿಗೆ ಹೆಚ್ಚು ತೊಂದರೆಯಾಗ್ತಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಅನೇಕ ಬಾರಿ ಆ ಆಸ್ಪತ್ರೆಗೆ ವಾರ್ನ್ ಮಾಡಿದ್ದೇನೆ. ಆದರೂ ಇಂದು ಕೊರೊನಾ ರೋಗಿಗೆ 5 ಲಕ್ಷ ಬಿಲ್ ಮಾಡಿದ್ದಾರೆ ಎನ್ನುವ ಸುದ್ದಿ ಕೇಳಿ ಆಘಾತವಾಯಿತು ಎಂದಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಸುಧಾಕರ್ ಮತ್ತೊಂದು ಟ್ವೀಟ್‌ನಲ್ಲಿ ಅಪೋಲೋ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ತಮ್ಮ ಟ್ವೀಟ್‌ನಲ್ಲಿ ಸಚಿವರು, ‘ಸರ್ಕಾರದ ಆದೇಶವನ್ನು ಸಂಪೂರ್ಣವಾಗಿ ಗಾಳಿಗೆ ತೂರುತ್ತಿರುವ ಆಸ್ಪತ್ರೆ ಆಡಳಿತ ಮಂಡಳಿ, ನಿಗದಿ ಮಾಡಿರುವ ದರಕ್ಕಿಂತಲೂ ಹೆಚ್ಚು ಹಣ ಪಡೆದಿದೆ. ಈ ವಿಷಯ ನನ್ನ ಗಮನಕ್ಕೆ ಬಂದಿದ್ದು, ಇಂದು ಆ ಖಾಸಗಿ ಆಸ್ಪತ್ರೆಯ ವಿರುದ್ಧ ಮುಲಾಜಿಲ್ಲದೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ’ ಎಂದು ಹೇಳಿದ್ದಾರೆ.
from India & World News in Kannada | VK Polls https://ift.tt/330Ty41