ವಿವಾಹೇತರ ಸಂಬಂಧ ಹೊಂದಿದ್ದಕ್ಕೆ ಮಹಿಳೆಗೆ ಗಂಡನನ್ನು ಹೆಗಲ ಮೇಲೆ ಹೊತ್ತು ನಡೆಯುವ ಶಿಕ್ಷೆ..!

ಭೋಪಾಲ್: ವಿವಾಹೇತರ ಸಂಬಂಧ ಹೊಂದಿದ್ದಾರೆ ಎನ್ನುವ ಕಾರಣಕ್ಕೆ ಮೂರು ಮಕ್ಕಳ ತಾಯಿಯೊಬ್ಬರನ್ನು ಅಮಾನುಷವಾಗಿ ಶಿಕ್ಷಿಸಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಝಬುವಾ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ ಸುದ್ದಿ ತಿಳಿದ ಝಬುವಾ ಪೊಲೀಸರು ಮಹಿಳೆಯ ಪತಿ ಸೇರಿದಂತೆ ಒಟ್ಟು ಏಳು ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸರ ಹೇಳಿಕೆ ಪ್ರಕಾರ ಕಳೆದ ಬುಧವಾರ ಈ ಘಟನೆ ನಡೆದಿದ್ದು, ಕಾರ್ಮಿಕ ಕೆಲಸ ಮಾಡುತ್ತಿರುವ ಆಕೆ ತನ್ನ ಸಹೋದ್ಯೋಗಿಯೊಂದಿಗೆ ಸಂಬಂಧ ಹೊಂದಿದ್ದಳು ಎಂದು ಹೇಳಲಾಗಿದೆ. ಹೀಗಾಗಿ ಆಕೆಯ ಸಂಬಂಧಿಕರು ಮತ್ತು ಗ್ರಾಮಸ್ಥರು ಆಕೆಗೆ ಶಿಕ್ಷೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಇನ್ನು ಆ ಭಾಗದ ಬುಡಕಟ್ಟು ಸಮುದಾಯದಲ್ಲಿ ಈ ತರಹದ ಶಿಕ್ಷೆ ಇದೇ ಮೊದಲೇನಲ್ಲ ಎಂದೂ ಹೇಳಲಾಗಿದೆ.


from India & World News in Kannada | VK Polls https://ift.tt/2BKH0m9

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...