ಭೀಕರ ರಸ್ತೆ ಅಪಘಾತದಲ್ಲಿ ತಾಯಿ ಮಗಳು ಸ್ಥಳದಲ್ಲೇ ಸಾವು..!

ರಾಯಚೂರು: ವೇಗವಾಗಿ ಬಂದ ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಗರದ ಪೋತಗಲ್ ರಸ್ತೆಯಲ್ಲಿ ನಡೆದಿದೆ. ರಾಯಚೂರಿನ ಶಾಖವಾದಿ ಗ್ರಾಮದ ಈಶ್ವರಮ್ಮ(30), ವನಿತಾ(3) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದು, ರಾಯಚೂರಿನ ಆಸ್ಪತ್ರೆಯೊಂದಕ್ಕೆ ಬಂದು ವಾಪಸ್ಸಾಗುವ ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಬೈಕ್‌ ಚಾಲನೆ ಮಾಡುತ್ತಿದ್ದ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ಸಂಭವಿಸಲು ಲಾರಿ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಹೇಳಲಾಗಿದ್ದು, ಘಟನೆ ನಡೆದ ತಕ್ಷಣ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ರಾಯಚೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


from India & World News in Kannada | VK Polls https://ift.tt/30ITQJU

ಟ್ರಾಫಿಕ್‌ ಫೈನ್‌ ಶೇ 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂಬರ್‌ 9ಕ್ಕೆ ಕೊನೆ! ಮರೆಯದಿರಿ, ಮರೆತು ನಿರಾಶರಾಗದಿರಿ

Traffic Fine Discount Last Day: ಸಂಚಾರಿ ನಿಯಮ ಉಲ್ಲಂಘನೆ ಮಾಡಿ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ಹಾಗಾದರೆ ಇದೇ ಕಡೆಯ ಅವಕಾಶ. ಶೇ. 50 ರಷ್ಟು ಡಿಸ್ಕೌಂಟ್‌ ಸೆಪ್ಟೆಂ...